Wednesday, January 28, 2026

ಸೀಲ್ ಡೌನ್ ನಿಯಂತ್ರಿತ ವಲಯದಿಂದ ಹೊರ ಹೋದ ವ್ಯಕ್ತಿಯ ಮೇಲೆ ಪ್ರಕರಣ ದಾಖಲು

ಬಂಟ್ವಾಳ : ಸೀಲ್ ಡೌನ್ ನಿಯಂತ್ರಿತ ವಲಯದಿಂದ ವ್ಯಕ್ಯಿಯೋರ್ವರು ಉದ್ದೇಶಪೂರ್ವಕವಾಗಿ ಮನೆಯಿಂದ ಹೊರಗೆ ಹೋಗಿದ್ದಾರೆ ಎಂದು ಅವರ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಎಸ್. ವಿ.ಎಸ್.ಶಾಲಾ ಓಣಿ ನಿವಾಸಿ ವಿಜಯಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.
ಕೋವಿಡ್ 19 ಪ್ರಕರಣದಲ್ಲಿ ಸಾವನ್ನಪ್ಪಿದ ಹಿನ್ನೆಲೆ ಬಂಟ್ವಾಳ ಪೇಟೆಯನ್ನು ಜಿಲ್ಲಾಡಳಿತದ ಅದೇಶದಂತೆ ಸೀಲ್ ಡೌನ್ ಮಾಡಲಾಗಿತ್ತು.

ನಿಯಂತ್ರಿತ ಪ್ರದೇಶಕ್ಕೆ ಒಳಪಟ್ಟ ವ್ಯಕ್ತಿಗಳು ಯಾರು ಕೂಡ ಮನೆಯಿಂದ ಹೋಗಬಾರದೆಂದು ಆದೇಶವಿದ್ದರೂ ಉದ್ದೇಶಪೂರ್ವಕವಾಗಿ ವಿಜಯನಂದ ಅವರು ಮನೆಯಿಂದ ಕಾಲ್ನಡಿಗೆಯಲ್ಲಿ ಹೊರಹೋಗಿದ್ದಾರೆ.
ದೇಶದಾದ್ಯಂತ ತುರ್ತು ಘೋಷಿಸಿ ಪ್ರಾಣ ನಿರೋಧಕ ನಿರ್ಭಂಧದ ನಿಯಮವೆಂದು ತಿಳಿದು ಕೂಡಾ ಕೋವಿಡ್ -19 ಕೊರೊನ ಸೋಂಕು ಹರಡುವಿಕೆಯಲ್ಲಿ ಬೇರೆಯವರ ಪ್ರಾಣಕ್ಕೆ ಅಪಾಯವಾಗುವ ರೀತಿಯಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರ ಮೇಲೆ ಪ್ರಕರಣ ದಾಖಲಾಗಿದೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...