Sunday, January 25, 2026

ಪ್ರಸನ್ನ ಕುಮಾರ್ ಪಕ್ಕಳ ಅವರಿಗೆ ಬೀಳ್ಕೊಡುಗೆ ಸಮಾರಂಭ

ಬಂಟ್ವಾಳ: ಬಂಟ್ವಾಳದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಸನ್ನ ಕುಮಾರ್ ಪಕ್ಕಳ ಅವರನ್ನು ಮಂಗಳೂರು
ತಾಲೂಕಿಗೆ ವರ್ಗಾವಣೆಗೊಳಿಸಲಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಬೀಳ್ಕೊಡುಗೆ ಮಾಡಲಾಯಿತು.
ಬಂಟ್ವಾಳ ಮಿನಿ ವಿಧಾನ ಸೌಧದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದ ಕಾರ್ಯಕ್ರಮದಲ್ಲಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್. ಆರ್ ಪ್ರಸನ್ನ ಕುಮಾರ್ ಪಕ್ಕಳ ಅವರ ಜನಸ್ನೇಹಿ ಗುಣ, ನಗುಮುಖದ ಸೇವೆ ಹಾಗೂ ಜನರಿಗೆ ಸೇವೆ ಮಾಡಬೇಕೆನ್ನುವ ಮನೋಬಾವ ಮಾದರಿಯಾಗಿದ್ದು,  ಅವರ ಕರ್ತವ್ಯ ದಕ್ಷತೆಗೆ ಶ್ರೇಯಸ್ಸು ಲಭಿಸಲಿ ಎಂದು ಹಾರೈಸಿದರು.
ಬಳಿಕ ತಾಲೂಕು ಕಚೇರಿ ಸಿಬ್ಬಂದಿಯವರ ಪರವಾಗಿ
ಮಾತನಾಡಿದ ಕೇಂದ್ರ ಸ್ಥಾನಿಯ ಶಿರಸ್ತೇದಾರ್ ರಾಧಾಕೃಷ್ಣ ಪ್ರಸನ್ನ ಕುಮಾರ್ ಅವರ ಬಗ್ಗೆ ಮೆಚ್ಚುಗೆ ಮಾತನಾಡಿ ಶುಭ ಹಾರೈಸಿದರು.

ಸಹೋದ್ಯೋಗಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಕಚೇರಿ ಸಿಬ್ಬಂದಿಗಳು, ಗ್ರಾಮ ಸಹಾಯಕರು ಹಾಗೂ ಸಾರ್ವಜನಿಕರು ಈ ಸಂದರ್ಭದಲ್ಲಿ
ಶುಭ ಹಾರೈಸಿದರು.
ಬಳಿಕ ಪಕ್ಕಳ ಅವರಿಗೆ ಶಾಲು, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸ್ವಾಗತಿಸಿ ವಂದಿಸಿದರು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...