Thursday, February 13, 2025

ದಿ.ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ಸ್ಮಾರಕ ವೃತ್ತದ ಲೋಕಾರ್ಪಣೆ ಹಾಗೂ ಪುತ್ಥಳಿಯ ಅನಾವರಣ ಕಾರ್ಯಕ್ರಮ

ಬಂಟ್ವಾಳ; ಪಚ್ಚಿನಡ್ಕ ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ಸಮಿತಿ ವತಿಯಿಂದ ಬೆಂಜನಪದವು ಸಮೀಪದ ಕಲ್ಪನೆ ಜಂಕ್ಷನ್ ನಲ್ಲಿ ನಿರ್ಮಾಣವಾದ ಬಿಲ್ಲವ ಸಮುದಾಯದ ನಾಯಕ, ಸರಳ ಸಜ್ಕನಿಕೆಯ,ಕೊಡುಗೈ ದಾನಿ,ಉದ್ಯಮಿಯಾಗಿದ್ದ ದಿ.ಕೆ.ಸೇಸಪ್ಪ ಕೋಟ್ಯಾನ್ ಪಚ್ಚಿನಡ್ಕ ಅವರ ಸ್ಮಾರಕ ವೃತ್ತದ ಲೋಕಾರ್ಪಣೆ ಹಾಗೂ ಪುತ್ಥಳಿಯ ಅನಾವರಣ ಕಾರ್ಯಕ್ರಮ ಮಾ.24 ರಂದು ಆದಿತ್ಯವಾರ ಸಂಜೆ ವೇಳೆ ನಡೆಯಿತು.

ಪೊಳಲಿ ತಪೋವನದ ವಿವೇಕಾಚೈತ್ಯಾನಂದ ಸ್ವಾಮಿ ಹಾಗೂ ಮಾಜಿ ಸಚಿವ ಬಿ‌.ರಮಾನಾಥ ರೈ ಅವರು ದೀಪ ಬೆಳಗಿಸಿದರು.

ಪೊಳಲಿ ತಪೋವನದ ವಿವೇಕಾಚೈತ್ಯಾನಂದ ಸ್ವಾಮಿ ಮಾತನಾಡಿ, ಜೀವನದಲ್ಲಿ ವ್ಯಕ್ತಿ ಮಾಡಿದ ಒಳ್ಳಯತನ ಹಾಗೂ ಸಮಾಜದಲ್ಲಿ ಗುರುತಿಸಿಕೊಂಡಿರುವ ರೀತಿ ಮಾತ್ರ ಜೀವನ ನಂತರವೂ ಜೀವಂತವಾಗಿರುತ್ತದೆ ಎಂದು ಅವರು ತಿಳಿಸಿದರು. ವೃತ್ತ ಅಥವಾ ಪುತ್ಥಳಿ ನಿರ್ಮಾಣ ಮಾಡುವುದು ಸುಲಭ,ಆದರೆ ಮುಂದಿನ ದಿನಗಳಲ್ಲಿ ಅದರ ರಕ್ಷಣೆ ಮತ್ತು ನಿರ್ವಹಣೆ ಉತ್ತಮವಾಗಿ ಮಾಡುವ ಜವಬ್ದಾರಿ ನಮ್ಮ ಮೇಲಿದ್ದು,ಅಗೌರವ ತರುವ ಕೆಲಸ ಆಗಬಾರದು ಎಂದು ಅವರು ಹೇಳಿದರು.

ಸೇಸಪ್ಪ ಕೋಟ್ಯಾನ್ ಅವರ ಹೆಸರು ಹೇಳುವುದಕ್ಕಿಂತ ಅವರ ಬದುಕಿನ ಆದರ್ಶದ ವ್ಯಕ್ತಿತ್ವವನ್ನು,ಉತ್ತಮ ಗುಣನಡತೆಯನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ದಿ.ಸೇಸಪ್ಪ ಕೋಟ್ಯಾನ್ ಸುಕೃತ ಕರ್ಮಗಳನ್ನು ಬಹಳ ಪ್ರಾಮಾಣಿಕವಾಗಿ ಮಾಡಿದ್ದಾರೆ. ಬಡವರ ಕಣ್ಣೀರು ಒರೆಸುವ ಕಾರ್ಯವನ್ನು ಸಮಾಜಸೇವೆ ಮೂಲಕ ಮಾಡಿದ್ದಾರೆ. ಅನೇಕ ಧಾರ್ಮಿಕ ,ಸಾಮಾಜಿಕ, ಶೈಕ್ಷಣಿಕ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ಓರ್ವ ಸಾಧಕನಾಗಿ ಬೆಳೆದವರು,ಶಕ್ತಿಯನ್ನು ನೀಡಿದವರು ಎಂದು ತಿಳಿಸಿದರು.

ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್ ಧರ್ಮ ಗುರು ಆಂಟನಿ ಲೋಬೋ, ಉದ್ದಬೆಟ್ಟು ಮಸೀದಿಯ ಧರ್ಮ ಗುರು ಕೆ.ವಿ.ಮಜೀದ್ ದಾರಿಮಿ,ದಿ.ಸೇಸಪ್ಪ ಕೋಟ್ಯಾನ್ ಅವರ ಧರ್ಮಪತ್ನಿ ಚಂದ್ರಾವತಿ ಸೇಸಪ್ಪ ಕೋಟ್ಯಾನ್, ನಿವೃತ್ತ ಮುಖ್ಯೋಪಾಧ್ಯಾಯ ಜಯರಾಮ ಶೆಟ್ಟಿ ಕೊಡಂಗೆ, ಬೆಂಜನಪದವು ಕರಾವಳಿ ಕಾರ್ಟೂನ್ಸ್ ಕೆ.ಪಿ.ಶೆಟ್ಟಿ, ಗುತ್ತಿಗೆದಾರ ದಿವಾಕರ್ ಮತ್ತಿತರ ಪ್ರಮುಖರು ಹಾಜರಿದ್ದರು.

ಪಚ್ಚಿನಡ್ಕ ದಿ.ಕೆ.ಸೇಸಪ್ಪ ಕೋಟ್ಯಾನ್ ಸ್ಮಾರಕ ವೃತ್ತ ನಿರ್ಮಾಣ ಸಮಿತಿ ಅಧ್ಯಕ್ಷ ಜಿ.ಪಂ.ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಸ್ವಾಗತಿಸಿ, ಚಂದ್ರಶೇಖರ ಭಂಡಾರಿ ವಂದಿಸಿದರು.

ಶಿಕ್ಷಕ ರಾಮಚಂದ್ರರಾವ್ ಕಾರ್ಯಕ್ರಮ ನಿರೂಪಿಸಿದರು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...