Sunday, January 25, 2026

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ ೫೦೦ ಕೋಟಿ ದಾಟಿದೆ ಎಂದು ದ.ಕ.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಹೇಳಿದರು.

ಅವರು ಬಿಸಿರೋಡಿನ ಅಂಬೇಡ್ಕರ್ ಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬಂಟ್ವಾಳ ತಾಲೂಕು ವತಿಯಿಂದ ,ತಾಲೂಕು ಪಂಚಾಯತ್ ಬಂಟ್ವಾಳ, ರೋಟರಿ ಕ್ಲಬ್ ಬಿಸಿರೋಡ ಸಿಟಿ, ಯನಪೋಯ ಹಾಗೂ ದೇರಳಕಟ್ಟೆ ಅಸ್ಪತ್ರೆಗಳ ಸಹಯೋಗದೊಂದಿಗೆ ನಡೆದ ಉಚಿತ ದಂತ ಮತ್ತು ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ ಮಾತನಾಡಿ, ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು‌ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಮುಟ್ಟಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಈ ದಿನದ ಅರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಅವರು ವಿನಂತಿಸಿದರು.

ಬೂಡ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಇಂದಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಜಾಸ್ತಿಯಾಗುತ್ತಿದ್ದು, ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು, ಇಂತಹ ಆರೋಗ್ಯ ಶಿಬಿರಗಳಲ್ಲಿ ಭಾಗಿಯಾಗಬೇಕು ಎಂದು ಅವರು ತಿಳಿಸಿದರು.

ವೇದಿಕೆಯಲ್ಲಿ ‌‌ ಜಿ.ಪಂ.ಮಾಜಿ ಸದಸ್ಯ ಎಂ.ಎಸ್.ಮಹಮ್ಮದ್, ಬೂಡ ಮಾಜಿ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ರೋಟರಿ ಅಧ್ಯಕ್ಷರುಗಳಾದ ಪದ್ಮನಾಭ ರೈ, ರೋ.ದಿವಾಕರ ಶೆಟ್ಟಿ ರೋಟರಿ ಸ್ಥಾಪಕ ಅಧ್ಯಕ್ಷ ರೋ. ಸತೀಶ್ , ಡಾ ವಿನಯ್ ,ಡಾ. ಭೂಷಣ್, ಡಾ.ಮನೋಹರ ರೈ ಉಪಸ್ಥಿತರಿದ್ದರು.

ತಾ.ಪಂ.ಇ.ಒ.ಸಚಿನ್ ಸ್ವಾಗತಿಸಿ ಧನ್ಯವಾದ ನೀಡಿದರು. ಸಂಶುದ್ದೀನ್ ಕಾರ್ಯಕ್ರಮ ನಿರೂಪಿಸಿದರು.

More from the blog

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...

ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ..

ಬಂಟ್ವಾಳ: ತುಂಬೆ ದಿವೀಶ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಾರ್ಷಿಕೋತ್ಸವ ಟ್ರಸ್ಟ್ ನ ಅಧ್ಯಕ್ಷ ಜಿ.ಪಂ.ಮಾಜಿ‌ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ವಕೀಲರಾದ ಅಭಿನಯ ಚಿದಾನಂದ ಮಾತನಾಡಿ...