ಬಂಟ್ವಾಳ: ಪಿಎಫ್‌ಐ ಬಂಟ್ವಾಳ ತಾಲೂಕು ಹಾಗೂ ಯೆನೆಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದಲ್ಲಿ ಮಾ. 10ರಂದು ಬೆಳಿಗ್ಗೆ 8.45 ರಿಂದ ಮಧ್ಯಾಹ್ನ 1 ಗಂಟೆಯವೆರೆಗೆ ಸಾರ್ವಜನಿಕ ರಕ್ತದಾನ ಶಿಬಿರವು ಕೈಕಂಬ ಪರ್ಲಿಯಾ ನರ್ಸಿಂಗ್ ಹೋಂ ಆಸ್ಪತ್ರೆಯಲ್ಲಿ ನಡೆಯಲಿದೆ.
ಪಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಅಧ್ಯಕ್ಷತೆ ವಹಿಸುವರು. ಬಂಟ್ವಾಳ ಎಎಸ್ಪಿ ಸೈದುಲು ಅಡಾವತ್, ಡಾ.ಹಿಫ್ಝುರಹ್ರಾನ್, ಡಾ. ಸೋವೇಶ್, ಪತ್ರಕರ್ತ ಇಮ್ತಿಯಾಝ್ ಶಾ ತುಂಬೆ, ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ, ಪುರಸಭಾ ಸದಸ್ಯ ಮುನೀಶ್ ಅಲಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.