Monday, February 2, 2026

ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

ಸಜಿಪ ಮೂಡ ಗ್ರಾಮದ ಕೊಲ್ಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಆದಿತ್ಯವಾರ ಬೆಳಿಗ್ಗೆ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಾಕ್ಷಿ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಉಪಾಧ್ಯಕ್ಷ ಸಿದ್ಧಿಕ್ ಕೊಳಕೆ, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಸಂಜೀವ ಪೂಜಾರಿ, ಪಂಚಾಯತಿ ಗ್ರಾ.ಪಂ.ಮಾಜಿ ಅಧ್ಯಕ್ಷರಾದ ವಿಶ್ವನಾಥ್ ಬಲ್ಚಡ, ಪಂ. ಅಭಿವೃದ್ಧಿ ಅಧಿಕಾರಿ ನಿರ್ಮಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹಿರಿಯ ಮೇಲ್ವಿಚಾರಕಿಯಾದ ಬಿ. ಭಾರತಿ, ಗುತ್ತಿಗೆದಾರ ಶೈಲೇಶ್ ಹಾಗೂ ಪಂ. ಸದಸ್ಯರು, ಯುವಕ ಮಂಡಲದ ಅಧ್ಯಕ್ಷರು ಸದಸ್ಯರು, ಜಾಗ ನೀಡಲು ಸಹಕರಿಸಿದ ದಾನಿ ನಾರಾಯಣ್ ಹಾಜರಿದ್ದರು

More from the blog

ಕೇಂದ್ರ ಬಜೆಟ್ 2026-27: ಸರ್ವೋದಯದ ಸಕಾರಾತ್ಮಕ ಬಜೆಟ್..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್‌ನ್ನು ಮಂಡಿಸಿದ್ದಾರೆ. ಈ ಬಜೆಟ್ ಭಾರತದ ಆರ್ಥಿಕ ಬೆಳವಣಿಗೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. "ವಿಕಸಿತ ಭಾರತ" ದ ಮಹಾತ್ವಾಕಾಂಕ್ಷೆಯನ್ನು...

Vittla : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಹಲ್ಲೆ – ಆರೋಪಿಗಳು ವಶಕ್ಕೆ

ವಿಟ್ಲ : ವ್ಯಕ್ತಿಯೋರ್ವರು ಮಾರ್ನಮಿಗುಡ್ಡೆ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ, ಮೂವರು ಅಪರಿಚಿತ ಮುಸುಕುಧಾರಿಗಳು ತಡೆದು ಹಲ್ಲೆ ನಡೆಸಿ, ಕೈಯಿಂದ ಮತ್ತು ಕಟ್ಟಿಗೆ ತುಂಡಿನಿಂದ ಹೊಡೆದು ಗಾಯಗೊಳಿಸಿ, ಅವರ ಬಳಿ ಇದ್ದ ಮೊಬೈಲ್...

Vittla : ನ್ಯಾಯವಾದಿಯ ಮನೆಗೆ ನುಗ್ಗಿ ಕಳ್ಳತನ..

ವಿಟ್ಲ: ನ್ಯಾಯವಾದಿಯೊಬ್ಬರ ಮನೆಗೆ ನುಗ್ಗಿ ಕಳ್ಳರು ಕಳ್ಳತನ ನಡೆಸಿದ ಘಟನೆ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. ಅಡ್ವಕೇಟ್ ಸಫಿಯಾ ನೌಫಲ್ ಅವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಮಂದಿ ಎಲ್ಲ ಒಂದು ತಿಂಗಳ...

Bantwal : ನೀರು ಕೇಳುವ ನೆಪದಲ್ಲಿ ವೃದ್ಧೆಯ ಕರಿಮಣಿ ಸರ ಎಗರಿಸಿದ ಕಳ್ಳ – ಪ್ರಕರಣ ದಾಖಲು

ಬಂಟ್ವಾಳ: ಅಪರಿಚಿತ ವ್ಯಕ್ತಿಯೋರ್ವ ನೀರು ಕೇಳುವ ನೆಪದಲ್ಲಿ ವೃದ್ಧ ಮಹಿಳೆಯ ಕುತ್ತಿಗೆಯಿಂದ ಬಂಗಾರದ ಕರಿಮಣಿ ಸರವನ್ನು ಎಳೆದೊಯ್ದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ವಗ್ಗ ಸಮೀಪದ...