Thursday, February 13, 2025

ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ -ಕಡಬದ ಕಿದುವಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಸುಬ್ರಹ್ಮಣ್ಯ: ನಾನು ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಅವರು ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ನೆಟ್ಟಣ ಕಿದು ಸಿಪಿಸಿಆರ್‌ಐ ಕಾರ್ಯಕ್ರಮದಲ್ಲಿ ಭಾಗಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಗೆ ತಾವು ಸ್ಪರ್ಧೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಅವರು ನಾನು ಸ್ಪರ್ಧೆ ಮಾಡಿಯೇ ಮಾಡುತ್ತೇನೆ ಎಂದು ನಗುತ್ತಾ ಉತ್ತರಿಸಿದರು.

ಚಿಕ್ಕಮಗಳೂರಿನಲ್ಲಿ ನಿಮ್ಮ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಸಚಿವರು, ರಾಜಕೀಯ ಎಂದರೆ ಅಸಮಾಧಾನಗಳು ಇರುತ್ತೆ. ಗೆಲ್ಲುವ ಸೀಟನ್ನು ಎಲ್ಲರೂ ಕೇಳುತ್ತಾರೆ. ಸೀಟು ಕೇಳುವಾಗ ಗೊಂದಲಗಳು ಹಾಗೇ ಆಗುತ್ತದೆ. ಇದಕ್ಕೂ ಚುನಾವಣೆಗೂ ಯಾವುದೇ ಸಂಬAಧ ಇರುವುದಿಲ್ಲ. ಕೊನೆಗೆ ಕೇಂದ್ರದ ಚುನಾವಣಾ ಮಂಡಳಿ ಯಾವ ನಿರ್ಧಾರ ಕೈಗೊಳ್ಳುತ್ತದೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು.

ಸಿಪಿಸಿಆರ್‌ಐಯಿಂದ ಮತ್ತೆ ಸರಕಾರಕ್ಕೆ ಹಣ ಕಟ್ಟಬೇಕೆಂದು ಬಂದಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯ ಇಲಾಖೆ ಮಧ್ಯ ಇರುವ ಸಮಸ್ಯೆ. ಈ ಬಗ್ಗೆ ಭುಪೇಂದ್ರ ಯಾದವ್ ಅವರ ಜೊತೆ ಮಾತನಾಡಿದ್ದೇನೆ. ಈಗ ಮತ್ತೆ ಸಮಸ್ಯೆ ಬಂದಿದೆ ಅದನ್ನು ಬಗೆಹರಿಸೋಣ ಎಂದರು.

ಅಡಿಕೆ ವಿದೇಶದಿಂದ ಆಮದು ಆಗುತ್ತಿದೆ ಎಂಬುದು ಗೊತ್ತಿಲ್ಲ. ವ್ಯಾಪರಸ್ಥರ ನಡುವೆ ಇರುವವರು ಅವರ ಲಾಭಕ್ಕೆ ಮಾಡುತ್ತಿರಬಹುದು. ಯಾಕೆಂದರೆ ಆಮದು ಆಗುತ್ತದೆ ಎಂದಾಗ ರೇಟ್ ಕುಸಿತ ಆಗುತ್ತದೆ ಅದೇ ಕಾರಣಕ್ಕೆ ಗೊಂದಲ ಸೃಷ್ಟಿಸುತ್ತಿರಬಹುದು. ಅಥವಾ ಪಿತೂರಿ ನಡೆದಿರುವ ಸಾಧ್ಯತೆಯೂ ಇರಬಹುದು ಎಂದರು.

ಪ್ಯಾಸೆಂಜರ್ ರೈಲಿಗೆ ಕ್ರಮ;

ಮಂಗಳೂರು-ಸುಬ್ರಹ್ಮಣ್ಯ ನಡುವೆ ಬೆಳಗ್ಗೆ, ಸಂಜೆ ಪ್ಯಾಸೆಂಜರ್ ರೈಲು ಬೇಡಿಕೆ ಬಗ್ಗೆ ನಾನು ರೈಲು ಸಚಿವರ ಜೊತೆ ಮಾತನಾಡಿ ಬೇಡಿಕೆ ಈಡೇರಿಸಲು ಪ್ರಯತ್ನಿಸುತ್ತೇನೆ ಎಂದರು.

ರಾಜ್ಯದಲ್ಲಿ ಬಿಜೆಪಿ ಗೆಲುವು;

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ಘೋಷಣೆ ಆಗಲಿದೆ. ಭಾರತೀಯ ಜನತಾ ಪಾರ್ಟಿ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಅದಕ್ಕೆ ಎಲ್ಲದಕ್ಕೂ ನಾವು ಬದ್ಧರಾಗಿದ್ದೇವೆ. ಕಳೆದ ೧೦ ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಮಟ್ಟದ ಅಭಿವೃದ್ಧಿಯಾಗಿದೆ. ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿ, ರೈಲು ವಿದ್ಯುದೀಕರಣ, ಅಮೃತ ಯೋಜನೆಯಡಿ ಸುಬ್ರಹ್ಮಣ್ಯ, ಉಡುಪಿ, ಚಿಕ್ಕಮಗಳೂರು ಭಾಗದ ರೈಲು ನಿಲ್ಧಾಣ ಆಯ್ಕೆಗೊಂಡು ಅಭಿವೃದ್ಧಿ ಆಗುತ್ತಿದೆ. ಸಿಆರ್‌ಎಫ್‌ನಲ್ಲಿ ರಸ್ತೆ ಬಂದಿದೆ, ಪಿಎಂಜೆಎಸ್, ಯಾವುದೇ ಹಳ್ಳಿಗಳಿಗೆ ತೆರಳಿದರೂ ಶೇ.೮೦-೯೦ ರಷ್ಟು ಜನರು ಕೇಂದ್ರದ ಬೇರೆ ಬೇರೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಅಭಿವೃದ್ಧಿ ಆಧಾರದಲ್ಲಿಯೇ ಓಟು ಕೇಳಲಿದ್ದೇವೆ ಎಂದ ಅವರು ಕರ್ನಾಟಕದಲ್ಲಿ ಬಿಜೆಪಿ ಶೇ.೧೦೦ ರಷ್ಟು ಗೆಲವು ಸಾಧಿಸುವ ವಿಶ್ವಾಸ ಇದೆ. ನರೇಂದ್ರ ಮೋದಿ ಅವರು ಅಭಿವೃದ್ಧಿ ಗಾಗಿ ಇಲ್ಲಿಗೆ ಬಂದಿದ್ದಾರೆ. ಜನಕ್ಕೆ ಮೋದಿ ಬೇಕಿದೆ ಎಂದರು. ಶಾಸಕಿ ಭಾಗೀರಥಿ ಮುರುಳ್ಯ ಜೊತೆಗಿದ್ದರು.

೧೧೦೩

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...