Saturday, July 12, 2025

ಶ್ರೀರಾಮ ಪದವಿ ಕಾಲೇಜಿನಲ್ಲಿ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟದ ಸಮಾರೋಪ ಮತ್ತು ಫಲಿತಾಂಶ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ದಶಮಾನೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟದ ಸಮಾರೋಪವು ಶ್ರೀರಾಮ ಪದವಿ ಕಾಲೇಜಿನ ಆವರಣದಲ್ಲಿ ನಡೆಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್ನ ಅಧ್ಯಕ್ಷ ಲಯನ್ ಶ್ರೀನಿವಾಸ್ ಪೂಜಾರಿ ಮೆಲ್ಕಾರ್ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಸಹ ನಿರ್ದೇಶಕ ಡಾ. ಪ್ರಸನ್ನ ಬಿ.ಕೆ., ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿಧರ ಮಾರ್ಲ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಪೂರ್ಣಶ್ರೀ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ್, ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪಂದ್ಯಾಟದ ಫಲಿತಾಂಶವು ಇಂತಿವೆ:- ಆಳ್ವಾಸ್ ಕಾಲೇಜು ಮೂಡುಬಿದಿರೆ ಪ್ರಥಮ ಸ್ಥಾನ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ ದ್ವಿತೀಯ ಸ್ಥಾನ, ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ತೃತೀಯ ಸ್ಥಾನ, ಪೂರ್ಣಪ್ರಜ್ಞ ಕಾಲೇಜು ಉಡುಪಿ ಚತುರ್ಥ ಸ್ಥಾನ ಪಡೆದುಕೊಂಡಿರುತ್ತದೆ. ಅತ್ಯುತ್ತಮ ದಾಳಿಕೋರ ಪ್ರಶಸ್ತಿ ಸಲಿಯತ್ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಅತ್ಯುತ್ತಮ ಆಲ್‌ರೌಂಡರ್ ಪ್ರಶಸ್ತಿ ವೀಣಾ ಆಳ್ವಾಸ್ ಕಾಲೇಜು ಮೂಡುಬಿದಿರೆ, ಅತ್ಯುತ್ತಮ ಸೆಟ್ಟರ್ ಪ್ರಶಸ್ತಿ ಚರೀಷ್ಮಾ ಆಳ್ವಾಸ್ ಕಾಲೇಜು ಮೂಡುಬಿದಿರೆ ಪಡೆದಿರುತ್ತಾರೆ. ಪಂದ್ಯಾಟದ ಫಲಿತಾಂಶ ವರದಿಯನ್ನು ವಿಟ್ಲ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ರಾಮಚಂದ್ರ ಕೆ. ವಾಚಿಸಿದರು.

ಕಾರ್ಯಕ್ರಮವನ್ನು ಇತಿಹಾಸ ಉಪನ್ಯಾಸಕಿ ಶುಭಲತಾ ಸ್ವಾಗತಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ್ ವಂದಿಸಿ, ರಸಾಯನಶಾಸ್ತ್ರ ಉಪನ್ಯಾಸಕಿ ಕವಿತಾ ನಿರೂಪಿಸಿದರು.

More from the blog

ತುಂಬೆಯ ಕಾವ್ಯ ಕೆ. ನಾಯಕ್ ಗೆ ಪಿ.ಎಚ್.ಡಿ ಪದವಿ..

ಬಂಟ್ವಾಳ: ತುಂಬೆಯ ಕಾವ್ಯ. ಕೆ. ನಾಯಕ್ ಇವರು ಐಐಎಸ್‌ಸಿ‌ನ ಅಂತರ್‌ಶಿಸ್ತಿನ ವಿಜ್ಞಾನ ವಿಭಾಗದ ಡೀನ್ ಹಾಗೂ ನ್ಯಾನೋ ಸೈನ್ಸ್ ಮತ್ತು ಇಂಜಿನಿಯರಿಂಗ್ ಕೇಂದ್ರದ ಪ್ರಾಧ್ಯಾಪಕ ಪ್ರೊ. ನವಕಾಂತ್ ಭಟ್ ಅವರ ಮಾರ್ಗದರ್ಶನದಲ್ಲಿ “ಎಲೆಕ್ಟ್ರೋಕೆಮಿಕಲ್...

ಫರಂಗಿಪೇಟೆ: ಸಂಕಲ್ಪ ಸಿದ್ಧಿಗಾಗಿ ಶ್ರೀ ಆಂಜನೇಯ ದೇವಸ್ಥಾನಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭೇಟಿ..

ಬಂಟ್ವಾಳ : ಸಂಕಲ್ಪ ಸಿದ್ಧಿಗಾಗಿ ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಯವರು ಜು.12ರಂದು ಫರಂಗಿಪೇಟೆಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಿಂದ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...