Sunday, January 25, 2026

ಗುರುಕುಲ ಹಿಂದೆ ಹೇಗಿತ್ತು ಎಂಬುದರ ನಿಜ ದರ್ಶನವೇ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ- ರಶ್ಮಿ ಎಸ್.ಆರ್‍.

ಬಂಟ್ವಾಳ: ಗುರುಕುಲ ಹಿಂದೆ ಹೇಗಿತ್ತು ಎಂಬುದರ ನಿಜ ದರ್ಶನ ನಮಗಿಂದು ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಆಗಿದೆ, ನಮಗೂ ಇಂತಹ ಶಿಕ್ಷಣ ಪಡೆಯುವ ಅವಕಾಶ ಸಿಗಬೇಕಿತ್ತು ಎಂದು ಬಂಟ್ವಾಳ ತಾಲೂಕಿನ ತಹಶೀಲ್ದಾರ್ ರಶ್ಮಿ ಎಸ್.ಆರ್‍. ಹೇಳಿದರು. ಅವರು ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ದೀಪ ಪ್ರದಾನ ಕಾರ್‍ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರಲ್ಲೂ ಒಂದೊಂದು ಪ್ರತಿಭೆ ಇದ್ದೇ ಇದೆ, ನಾವಿಂದು ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳುವತ್ತ ಗಮನಹರಿಸಬೇಕಿದೆ. ನಾವೇನು ಕೆಲಸ ಮಾಡುತ್ತೇವೋ ಅದನ್ನು ಇಚ್ಚೆಯಿಂದ ಮಾಡಿದಾಗ ಮಾತ್ರ ಪ್ರತಿಫಲ ಸಿಗುತ್ತದೆ. ಬದುಕಿನ ಯಾವ ಸಮಯದಲ್ಲೂ ವಿಶ್ವಾಸ ಕಳೆದುಕೊಳ್ಳದೆ ಪೂರ್ಣ ಪ್ರಯತ್ನದಿಂದ ಕೆಲಸ ಮಾಡಿದಾಗ ವೈಫಲ್ಯತೆ ಎಂಬುದು ಎದುರಾಗುವುದಿಲ್ಲ. ಈ ರೀತಿ ಸಾಧನೆಯ ಹಾದಿಯಲ್ಲಿ ಮುನ್ನಡೆಯಿರಿ ಎಂದು ಹೇಳುತ್ತಾ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್‌ ಕಲ್ಲಡ್ಕ ಮಾತನಾಡಿ, ವೈಜ್ಞಾನಿಕ ಯುಗಕ್ಕೆ ಹಾರುವ ಭರದಲ್ಲಿ ಭಾರತೀಯ ಮೂಲ ಚಿಂತನೆಗಳನ್ನು ನಾವಿಂದು ಮರೆಯುತ್ತಿದ್ದೇವೆ. ಧರ್ಮ, ಸಂಸ್ಕೃತಿ, ಜೀವನ ಮೌಲ್ಯಗಳು ನಮ್ಮ ಜೀವನದ ಆಧಾರ. ಇವುಗಳನ್ನು ಉಳಿಸಿಕೊಂಡು ಸಮಾಜದ ನಡುವೆ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾಲಯದ ಡೀನ್ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಶ್ರೀಪತಿ ಕಲ್ಲೂರಾಯ, ಬೆಂಗಳೂರಿನ ಗಮ್ಯ ಫೌಂಡೇಶನ್‌ನ ಅಧ್ಯಕ್ಷ ಗೌತಮ್‌ಜೀ, ಬೆಂಗಳೂರಿನ ನೆಪ್ರೋ ಸಂಸ್ಥೆಯ ಸಹಾಯಕ ಉಪನ್ಯಾಸಕಿ ಡಾ. ಲೀಲಾವತಿ, ಉಡುಪಿ ಹೆಣ್ಮಕ್ಕಳ ಸರಕಾರಿ ಪದವಿಪೂರ್ವ ವಿದ್ಯಾಲಯದ ಸಹಾಯಕ ಉಪನ್ಯಾಸಕ ಲಕ್ಷ್ಮೀಕಾಂತ್ ಕಾಪು,ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹ ಸಂಚಾಲಕ ರಮೇಶ್‌ ಎನ್, ಪ್ರೌಡಶಾಲಾ ಮುಖ್ಯ ಶಿಕ್ಷಕಿ ವಸಂತಿಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸೌಮ್ಯ ಪಿ. ಮಾತಾಜಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 10ನೇ ತರಗತಿಯ ವಿದ್ಯಾರ್ಥಿಗಳು 9ನೇ ತರಗತಿಯ ವಿದ್ಯಾರ್ಥಿಗಳಿಗೆ ದೀಪ ಪ್ರದಾನ ಮಾಡಿ ತಮ್ಮ ಕೊಡುಗೆಯನ್ನು ಶಾಲೆಗೆ ಸರ್ಮಪಿಸಿದರು. ಅತಿಥಿಗಳು ವಿದ್ಯಾರ್ಥಿಗಳಿಗೆ ತಿಲಕಧಾರಣೆ ಮಾಡಿ ಆಶೀರ್ವದಿಸಿದರು. ಶಿಕ್ಷಕಿ ಶಾಂಭವಿ ಸ್ವಾಗತಿಸಿ, ಪ್ರಶಾಂತ್ ವಂದಿಸಿದರು. 9ನೇ ತರಗತಿ ವಿದ್ಯಾರ್ಥಿನಿ ಶಿವಾನಿ ಕಾರ್‍ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...