Thursday, June 26, 2025

‘ಮೃತ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಊರ ಹೊರಗೆ ಜಮೀನು ಗುರುತಿಸಲು ಶೀಘ್ರ ಆದೇಶ’: ಸಚಿವ ಬಿ. ಶ್ರೀರಾಮುಲು

ಚಿಕ್ಕಬಳ್ಳಾಪುರ: ಕೊರೊನಾ ಸೋಂಕಿನಿಂದಾಗಿ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದಂತೆ ಕೆಲವೆಡೆ ವಿರೋಧಗಳು ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ”ಕೊರೊನಾದಿಂದ ಸಾವನ್ನಪ್ಪಿದವರ ಅಂ‌ತ್ಯ ಸಂಸ್ಕಾರವನ್ನು ಗ್ರಾಮದಿಂದ ಹೊರಗೆ ಕನಿಷ್ಠ 2 ಎಕರೆ ಜಮೀನು ಗುರುತಿಸುವಂತೆ ಶೀಘ್ರದಲ್ಲೇ ಆದೇಶ ಮಾಡಲಾಗುವುದು” ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಈ ಬಗ್ಗೆ ಮಾತನಾಡಿದ ಅವರು, ”ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ದೂರುಗಳು ಕೂಡಾ ಬರುತ್ತಿದೆ. ನಗರದಲ್ಲಿ ಅಂತ್ಯ ಸಂಸ್ಕಾರ ಮಾಡಿದಾಗ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಬಳಕೆ ಮಾಡಿ ಪೇಪರ್‌ನ ಕಣಗಳು ಗಾಳಿ ಮೂಲಕ ಸುತ್ತಮುತ್ತ ಮನೆಗಳಿಗೂ ತಲುಪುತ್ತಿದೆ ಎಂದು ದೂರು ಬಂದಿದೆ. ಈ ನಿಟ್ಟಿನಲ್ಲಿ ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ಪ್ರತೇಕವಾದ ಜಾಗವನ್ನು ಗುರುತು ಮಾಡಲು ಜಿಲ್ಲಾಡಳಿತಕ್ಕೆ ಶೀಘ್ರದಲ್ಲೇ ಸೂಚನೆ ನೀಡಲಾಗುವುದು” ಎಂದು ಹೇಳಿದ್ದಾರೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...