Tuesday, July 15, 2025

ಆ. 24ರಂದು ಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಸೀಸನ್ 3 ಮತ್ತು ನಮ್ಮೂರ ಟೆಕ್ನೀಶಿಯನ್..

ಬಂಟ್ವಾಳ : ಬಾಲ್ಯದಿಂದಲೇ ಮಕ್ಕಳಿಗೆ ವೇದಿಕೆ ಹತ್ತಲು ಅವಕಾಶ ಸಿಗುವುದು ಕೃಷ್ಣ ವೇಷದ ಮೂಲಕ. ಇಂತಹ ಅವಕಾಶವನ್ನು ಇಲ್ಲಿನ ಪೊಸಳ್ಳಿಯ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿರುವ ಕುಲಾಲ ಸೇವಾದಳವು ಕೃಷ್ಣ ಕೃಷ್ಣ ಶ್ರೀ ಕೃಷ್ಣಾ ಎಂಬ ಶಿರೋನಾಮೆಯಡಿ ಕಳೆದೆರಡು ವರ್ಷಗಳಿಂದ ನಡೆಸುತ್ತಾ ಬಂದಿರುವ ಕಾರ್ಯಕ್ರಮದಲ್ಲಿ ನೀಡುತ್ತಾ ಬರುತ್ತಿದೆ. ಈ ವರ್ಷವೂ ಅದರ ಸೀಸನ್ 3 ಕಾರ್ಯಕ್ರಮ ಆಗಸ್ಟ್ 24ರಂದು ಬಿ.ಸಿ.ರೋಡಿನ ಕುಲಾಲ ಸಮುದಾಯ ಭವನದಲ್ಲಿ ನಡೆಲಿದೆ ಎಂದು ಸಂಘದ ಅಧ್ಯಕ್ಷ ರಮೇಶ್ ಸಾಲ್ಯಾನ್ ಸಂಚಯಗಿರಿ ಹೇಳಿದ್ದಾರೆ.

ಅವರು ಆದಿತ್ಯವಾರ ಬಿ.ಸಿ.ರೋಡಿನ ಕುಲಾಲ ಸಮುದಾಯ ಭವನದಲ್ಲಿ ನಡೆದ ಕೃಷ್ಣ ಕೃಷ್ಣ ಶ್ರೀ ಕೃಷ್ಣಾ – ಸೀಸನ್ ೩ರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಸೇವಾದಳಪತಿ ಜಯಂತ್ ಕುಲಾಲ್ ಅಗ್ರಬೈಲು ಮಾತನಾಡಿ ಕೃಷ್ಣ ವೇಷ ಸ್ಪರ್ಧೆಯ ಜೊತೆ ತಾಲೂಕಿನ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಟ್ಟರ್, ವೆಲ್ಡರ್, ಮೆಶಿನಿಷ್ಟ್, ಅಟೋಮೊಬೈಲ್ ವರ್ಕರ್, ಡಿಸೇಲ್ ಮೆಕ್ಯಾನಿಕ್, ಎಸಿ ಟೆಕ್ನಿಶಿಯನ್, ಮೆಶಿನ್ ಆಪರೇಟರ್‍ಸ್, ಮೊಬೈಲ್ ಟೆಕ್ನಿಶಿಯನ್, ಅಟೋ ಎಲೆಕ್ಟ್ರೀಶಿಯನ್, ದ್ವಿಚಕ್ರ, ತ್ರಿಚಕ್ರ, ಘನವಾಹನಗಳ ಎಲ್ಲಾ ವಿಭಾಗದ ಟೆಕ್ನಿಶಿಯನ್‌ರವರನ್ನು ಗುರುತಿಸಿ ‘ನಮ್ಮೂರ ಟೆಕ್ನೀಶಿಯನ್’ ಎಂಬ ಶೀರ್ಷಿಕೆಯಲ್ಲಿ ಗೌರವಿಸಲಾಗುವುದು ಎಂದು ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಯಾದವ ಅಗ್ರಬೈಲು ಸ್ವಾಗತಿಸಿದರು. ವೇದಿಕೆಯಲ್ಲಿ ಕೋಶಾಧಿಕಾರಿ ಸೋಮನಾಥ ಸಾಲ್ಯಾನ್, ಮಹಿಳಾ ಘಟಕದ ಅಧ್ಯಕ್ಷೆ ಆಶಾ ಗಿರಿಧರ್, ಉಪಾಧ್ಯಕ್ಷೆ ಜಲಜಾಕ್ಷಿ ಕುಲಾಲ್ ಪಾಣೆಮಂಗಳೂರು, ಜತೆಕಾರ್ಯದರ್ಶಿ ಮೀನಾಕ್ಷಿ ಪದ್ಮನಾಭ, ಸತೀಶ್ ಸಂಪಾಜೆ ಉಪಸ್ಥಿತರಿದ್ದರು.

ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.

More from the blog

ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ನಿಧನ.. 

'ಅಭಿನಯ ಸರಸ್ವತಿ' ಎಂದೇ ಖ್ಯಾತಿ ಗಳಿಸಿರುವ ಕನ್ನಡದ ಹಿರಿಯ ನಟಿ ಬಿ. ಸರೋಜಾದೇವಿ(87) ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ಧೀಮಂತ ಅಭಿನೇತ್ರಿಯಲ್ಲೋರ್ವರು. ಸುಮಾರು 6 ದಶಕಗಳ ಕಾಲ ಚಿತ್ರರಂಗಕ್ಕೆ...

ಕೇಂದ್ರ ಸರ್ಕಾರದಿಂದ ಮಂಗಳೂರಿಗೆ 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳ ಮಂಜೂರು : ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಇ-ಬಸ್ ಸೇವಾ ಯೋಜನೆಯಡಿ ಮಂಗಳೂರಿಗೆ ಒಟ್ಟು 100 ಹೊಸ ಇಲೆಕ್ಟ್ರಿಕ್‌ ಬಸ್‌ಗಳನ್ನು ಮಂಜೂರು ಮಾಡಿರುವುದಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌...

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಹುಬ್ಬಳ್ಳಿಯ ಅವ್ವ ಸೇವಾ ಟ್ರಸ್ಟ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ..

ಮಂಗಳೂರು : ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಮಾಧ್ಯಮ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಗೆ ನೀಡಲಾಗುವ ಪ್ರತಿಷ್ಠಿತ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮಾರ್ಗದರ್ಶನದ ಹುಬ್ಬಳ್ಳಿ ಅವ್ವ ಸೇವಾ...

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...