Thursday, January 29, 2026

ಸಾರ್ವಜನಿಕರಿಗೆ ಆರೋಗ್ಯ ಹಾಗೂ ಕಾನೂನಿನ ಅರಿವು ಮೂಡಿಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಸೌಮ್ಯ

ಮಡಂತ್ಯಾರು: ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಆರಕ್ಷಕ ಠಾಣೆಯ ಠಾಣಾಧಿಕಾರಿ ಸೌಮ್ಯ ರವರು ಮಡಂತ್ಯಾರು, ಬಸವನಗುಡಿ, ಪುಂಜಾಲಕಟ್ಟೆ , ನೇರಳಕಟ್ಟೆ ವಾಮದಪದವು ಸೇರಿದಂತೆ ಇತರ ಸ್ಥಳಗಳಲ್ಲಿ ದಿನಸಿ ಅಂಗಡಿಗಳಲ್ಲಿ ದಿನನಿತ್ಯ ಉಪಯೋಗ ವಸ್ತುಗಳ ಖರೀದಿಯಲ್ಲಿ ತೊಡಗಿದ್ದ ಜನತೆಗೆ, “ಕೋರೊನ” ದ ಬಗ್ಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಿದರು. ಕೊರೋನ ವೈರಸ್ ಹರಡದಂತೆ ತಡೆಗಟ್ಟುವಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು.

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮವನ್ನು ಸರಿಯಾಗಿ ಪಾಲಿಸುವಂತೆ ಹಾಗೂ ಅನಗತ್ಯ ವಿಚಾರಗಳಿಗೆ ಯಾರು ಕೂಡ ಮನೆಯ ಹೊರಬಾರದಂತೆ ವಿನಂತಿಸಿದರು. ಜನರು ಅಗತ್ಯ ವಸ್ತುಗಳ ಖರೀದಿಗಾಗಿ ಮಧ್ಯಾಹ್ನ 12ಗಂಟೆಯೊಳಗೆ ಮುಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿ ಸೂಚನೆ ನೀಡಿದ್ದಾರೆ.

ಮಧ್ಯಾಹ್ನ 12 ಗಂಟೆಯ ನಂತರ ಯಾರು ಕೂಡ ತುರ್ತು ಕಾರ್ಯಗಳ ಸಂದರ್ಭದಲ್ಲಿ ಹೊರತುಪಡಿಸಿ, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವುದು ಕಂಡು ಬಂದರೆ ಅಂಥವರ ಚಾಲಕನ ಪರವಾನಿಗೆ ಹಾಗೂ ವಾಹನ ಪರವಾನಿಗೆಯನ್ನು ರದ್ದುಗೊಳಿಸುತ್ತೆನೆ ಎಂದು ಹೇಳಿ IPC ಸೆಕ್ಷನ್ ಪ್ರಕಾರ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತೆವೆ ಎಂದು ಧ್ವನಿವರ್ಧಕದ ಮೂಲಕ ಹೇಳಿ,  ಇದಕ್ಕೆ ಸಾರ್ವಜನಿಕರು ಸಹಕರಿಸುವಂತೆ ಕೇಳಿಕೊಂಡರು.

More from the blog

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...