Monday, January 26, 2026

ಸಿದ್ದಕಟ್ಟೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ

ಬಂಟ್ವಾಳ: ಸಿದ್ದಕಟ್ಟೆ ವ್ಯವಸಾಯ ಸಹಕಾರಿ ಬ್ಯಾಂಕ್ ನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.
ಒಟ್ಟು 13 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 10 ಸ್ಥಾನವನ್ನು ಗಳಿಸಿದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 3 ಸ್ಥಾನವನ್ನು ಪಡೆದಿದ್ದಾರೆ.

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ಪ್ರಭಾಕರ ಪ್ರಭು ಕರ್ಪೆ, ಸಂದೇಶ್ ಶೆಟ್ಟಿ ಸಂಗಬೆಟ್ಟು, ರಾಜೇಶ್ ಶೆಟ್ಟಿ ಎಳಿಯನಡುಗೋಡು, ದಿನೇಶ್ ಪೂಜಾರಿ ಆರಂಬೋಡಿ, ಮಂದಾರತಿ ಶೆಟ್ಟಿ ಸಂಗಬೆಟ್ಟು, ಹರೀಶ್ ಆಚಾರ್ಯ ರಾಯಿ, ಉಮೇಶ್ ಗೌಡ ಸಂಗಬೆಟ್ಟು, ಸತೀಶ್ ಪೂಜಾರಿ ಸಂಗಬೆಟ್ಟು, ಜಾರಪ್ಪ ನಾಯ್ಕ ಕರ್ಪೆ, ವೀರಪ್ಪ ಪರವ ಆರಂಬೋಡಿ ವಿಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಪದ್ಮರಾಜ್ ಬಲ್ಲಾಳ್, ಅರುಣಾ ಸುರೇಶ್ ಶೆಟ್ಟಿ, ದೇವರಾಜ್ ಸಾಲಿಯಾನ್ ಅವರು ವಿಜಯ ಸಾಧಿಸಿದ್ದಾರೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...