Friday, July 4, 2025

ರಾಷ್ಟ್ರೀಯ ಮತದಾನ ದಿನಾಚರಣೆ

ಬಂಟ್ವಾಳ :ದಿನಾಂಕ 25/01/2019 ರ ಪೂರ್ವಾಹ್ನ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯತ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ ಇದರ ಸಹಯೋಗದೊಂದಿಗೆ ಮತದಾರರ ದಿನವನ್ನು ಆಚರಿಸಲಾಯಿತು.
ಪೂರ್ವಾಹ್ನ 9.00 ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇದರ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಪ್ರಾಧ್ಯಾಪಕ ವೃಂದ ಜೊತೆಯಾಗಿ ಪ್ರಥಮ ದರ್ಜೆ ಕಾಲೇಜಿನ ಆವರಣದಿಂದ ಮತದಾರರ ಜಾಗೃತಿ ಮೂಡಿಸುವ ಘೋಷಣೆಗಳೊಂದಿಗೆ ಜಾಥಾ ಹೊರಟು ಸಿದ್ಧಕಟ್ಟೆ ಚರ್ಚ್, ಮಾರುಕಟ್ಟೆ, ಪೇಟೆಯ ಪರಿಸರದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮರಳಿ ಕಾಲೇಜಿನ ಆವರಣವನ್ನು ತಲುಪಿರುತ್ತಾರೆ. ಸ್ಥಳೀಯ ಜನಪ್ರಿಯ ವೈದ್ಯರಾದ ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆಇವರು ಜಾಥಾಗೆ ಚಾಲನೆ ನೀಡಿರುತ್ತಾರೆ.


ಕಾಲೇಜು ಸಭಾಂಗಣದಲ್ಲಿ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸತ್ಯನಾರಾಯಣ ಭಟ್‌ರವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ಮತದಾರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು. ಪ್ರತಿಯೊಂದನ್ನು ಅರ್ಥೈಸಿಕೊಂಡು ಹೆಜ್ಜೆ ಇಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಾ.ಸುದೀಪ್ ಅನಂತ ಪದ್ಮ ಹೆಲ್ತ್ ಸೆಂಟರ್ ಸಿದ್ಧಕಟ್ಟೆ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಮತದಾನದ ಮಹತ್ವವನ್ನು ವಿವರಿಸಿ ಪ್ರತಿಯೊಬ್ಬರೂ ಜಾಗೃತರಾಗಬೇಕು. ಮತದ ಮೌಲ್ಯವನ್ನು ಅರ್ಥೈಸಿಕೊಂಡು ಮತದಾನದಲ್ಲಿ ಭಾಗವಹಿಸಬೇಕು. ಗ್ರಾಮೀಣ ಪ್ರದೇಶದ ಮತದಾರರನ್ನು ಜಾಗೃತಿಗೊಳಿಸುವ ಮೂಲಕ ಶೇಕಡಾವಾರು ಮತದಾನವನ್ನು ಹೆಚ್ಚಿಸುವ ಕೆಲಸದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಮನೀಶ್ ಪ್ರಥಮ ಬಿಎ ಪ್ರಾರ್ಥಿಸಿದರು. ಇಲೆಕ್ಟೋರಲ್ ಕ್ಲಬ್‌ನ ಸಹ ಸಂಚಾಲಕರಾದ ಶ್ರೀನಿವಾಸ ಗ್ರಂಥಪಾಲಕರು ಸ್ವಾಗತಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಹನುಮಂತಯ್ಯ ಜಿ.ಹೆಚ್ ರವರು ವಂದಿಸಿದರು. ವಾಣ ಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪಾವನಿ ಪಿ ಕಾರ್ಯಕ್ರಮ ನಿರೂಪಿಸಿದರು.

ಪ್ರೊ. ಸತ್ಯನಾರಾಯಣ ಭಟ್ ಪ್ರಾಂಶುಪಾಲರು
ಮೊಬೈಲ್ :9449521720

ಕಛೇರಿ : 08255 269789

 

 

More from the blog

ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ: ಕ್ಷಯರೋಗಿಗಳಿಗೆ ಆಹಾರ ಕಿಟ್ ವಿತರಣೆ

ಬಂಟ್ವಾಳ : ತಾಲೂಕಿನ ಇರ್ವತ್ತೂರು ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಟು ಗ್ರಾಮಗಳ ವ್ಯಾಪ್ತಿಯ ಕ್ಷಯರೋಗಿಗಳಿಗೆ ಪ್ರಧಾನಮಂತ್ರಿ ಕ್ಷಯಮುಕ್ತ ಭಾರತ ಅಭಿಯಾನ ಯೋಜನೆಯಡಿ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ವಿತರಣಾ...

School holiday:ಬಂಟ್ವಾಳ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ

ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 04.07.2025 ರಂದು ರಜೆ ಘೋಷಿಸಲಾಗಿದೆ...

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...