Thursday, June 26, 2025

ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆ

ಬಂಟ್ವಾಳ: ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ಧಕಟ್ಟೆ ಇವುಗಳ ಸಂಯುಕ್ತ ಆಶ್ರಯದಲ್ಲಿ ವೃತ್ತಿ ಸಾಹಿತ್ಯ ಮಾರ್ಗದರ್ಶನ ಸಭೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಸಂದೇಶ್ ಶೆಟ್ಟಿ ಉಪಾಧ್ಯಕ್ಷರು, ಕಾಲೇಜು ಅಭಿವೃದ್ಧಿ ಸಮಿತಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಕುರಿತು ವಿದ್ಯಾರ್ಥಿಗಳಾದ ನೀವು ವಿದ್ಯಾರ್ಜನೆಯ ಸಂದರ್ಭದಲ್ಲಿ ತಮ್ಮೆಲ್ಲಾ ಪರಿಶ್ರಮವನ್ನು ಧಾರೆಯೆರೆದು ಯಶಸ್ಸನ್ನು ಗಳಿಸಿ ಹಾಗೂ ಅತ್ಯುತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕ್ಲಿಂಟನ್ ಲೋಬೊ Free Lance Trainer Mangalore ಇವರು ವಿದ್ಯಾರ್ಥಿಗಳಿಗೆ ಸ್ವ ಉದ್ಯೋಗ ಮತ್ತು ಅಂತರ್ಜಾಲದ ಬಳಕೆ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿಯಾದ ಆಂಡ್ರಿಯನ್ ಡಿಸೋಜ ಇವರು ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿ ಕೌಶಲ್ಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಬಗ್ಗೆ ತರಬೇತಿಯನ್ನು ನೀಡಿದರು. ಡಾ. ಪ್ರೀತಿ ಕೀರ್ತಿ ಡಿಸೋಜ, ವಾಣಿಜ್ಯ ವಿಭಾಗ, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಉನ್ನತ ಶಿಕ್ಷಣ ಹಾಗೂ ಉದ್ಯೋಗವಕಾಶಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಆರಿಸಿಕೊಳ್ಳಬಹುದಾದ ವಿವಿಧ ವೃತ್ತಿಗಳು ಹಾಗೂ ಅವುಗಳಿಗೆ ಬೇಕಾದ ವಿದ್ಯಾರ್ಹತೆಗಳ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ಭಾರತದಲ್ಲಿ ಪ್ರಮುಖ ಉದ್ಯೋಗದಾತರ ಕುರಿತು ವಿವರವಾದ ಪ್ರಾತ್ಯಕ್ಷಿಕೆಯನ್ನು ಒದಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸೌಮ್ಯ ಹೆಚ್.ಕೆ ಇವರು ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡುವಂತೆ ತಿಳಿಸಿದರು. ವೃತ್ತಿಯಲ್ಲಿ ಮೇಲು-ಕೀಳು ಎಂಬುದಿಲ್ಲ ಆಯ್ಕೆ ಮಾಡಿಕೊಂಡ ವೃತ್ತಿಯಲ್ಲಿ ಮನಪೂರ್ವಕವಾಗಿ ಹಾಗೂ ತ್ಯಾಗ ಮನೋಭಾವದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ವಿನಯ್ ಎಂ.ಎಸ್ ಸಹಾಯಕ ಪ್ರಾಧ್ಯಾಪಕರು ಆಂಗ್ಲ ಭಾಷಾ ವಿಭಾಗ ಇವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕಾರ್ಯಕ್ರಮದಲ್ಲಿ ಡಾ. ಶ್ರೀನಿವಾಸ ಗ್ರಂಥಪಾಲಕರು ವಂದಿಸಿದರು. ಮನೀಶ್ ತೃತೀಯ ಬಿಎ ಪ್ರಾರ್ಥಿಸಿ ಪ್ರಜ್ವಲ್ ತೃತೀಯ ಬಿಕಾಂ ನಿರೂಪಿಸಿದರು. ತರಬೇತಿಯು ದಿನಪೂರ್ತಿ ತೃತೀಯ ಪದವಿ ವಿದ್ಯಾರ್ಥಿಗಳಿಗೆ ನಡೆಯಿತು.

ಸೌಮ್ಯ ಹೆಚ್.ಕೆ
ಪ್ರಾಂಶುಪಾಲರು
ಮೊಬೈಲ್ : ೯೪೮೧೯೮೪೭೩೩
ಕಛೇರಿ : ೦೮೨೫೫ ೨೬೯೭೮೯

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...