Monday, January 26, 2026

ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜ್: ರಾಷ್ಟ್ರೀಯ ಯುವ ಸಪ್ತಾದ ಸಮಾರೋಪ ಸಮಾರಂಭ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನ ಸಾಂಸ್ಕೃತಿಕ ಸಂಘ, ರೋವರ್ ರೇಂಜರ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಇಂದು ರಾಷ್ಟ್ರೀಯ ಯುವ ಸಪ್ತಾದ ಸಮಾರೋಪ ಸಮಾರಂಭ ಜರಗಿತು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಇರುವ ಅವಕಾಶಗಳಲ್ಲಿ ಇಂತಹ ಕಾರ್ಯಕ್ರಮಗಳು ಸೇರಿವೆ. ಭಾರತ ದೇಶವು ಪ್ರಪಂಚಕ್ಕೆ ನೀಡಿದ ಅತ್ಯದ್ಭುತ ಕೊಡುಗೆಗಳಲ್ಲಿ ಸ್ವಾಮಿ ವಿವೇಕಾನಂದರು ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಇಂತಹ ಕ್ಷಾತ್ರ ತೇಜ ಹೊಂದಿರುವ ವಿವೇಕಾನಂದರ ಆದರ್ಶಗಳನ್ನು ಹಾಗೂ ಬೋಧನೆಗಳನ್ನು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ನಾವೆಲ್ಲರೂ ಅನುಸರಿಸುವ ಪ್ರಮಾಣ ಮಾಡೋಣ ಎಂದರು.

ಮಂಗಳೂರಿನ ನಿವೃತ್ತ ಸೇನಾಧಿಕಾರಿ ಗೋಪಿನಾಥ್ ರಾವ್ ಅವರು ಮಾತನಾಡುತ್ತಾ, ವಿದ್ಯಾರ್ಥಿಗಳಲ್ಲಿ ವಿವೇಕಾನಂದರು ಬೋಧಿಸಿದ ದೃಢ ನಿಶ್ಚಯ, ಏಕಾಗ್ರತೆ ಹಾಗೂ ಏಕತಾ ಭಾವನೆಯನ್ನು ಅನುಸರಿಸಿ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸುವಂತೆ ತಿಳಿಸಿದರು. ಪ್ರಪಂಚಕ್ಕೆ ಹಲವು ಮೊದಲುಗಳನ್ನು ನೀಡಿದ ಅಖಂಡ ಭಾರತದ ಸಾಕ್ಷಾತ್ಕಾರಕ್ಕೆ ಕಾರಣೀಭೂತರಾದ ಸ್ವಾಮಿ ವಿವೇಕಾನಂದರು ಮುಂಬರುವ ಹಲವು ಪೀಳಿಗೆಗೆ ಆಧ್ಯಾತ್ಮದ ದಾರಿದೀಪವಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ ಅವರು, ಸ್ವಾಮಿ ವಿವೇಕಾನಂದರು ಜಗತ್ತಿಗೆ ಶಾಂತಿ ಹಾಗೂ ಮಾನವತೆಯ ಸಂದೇಶ ಸಾರಿದವರು. ಲೋಕಕಲ್ಯಾಣಕ್ಕಾಗಿ ಜಗದಗಲಕ್ಕೆ ಸಂಚರಿಸಿ ಸರ್ವರಲ್ಲಿಯೂ ಸೋದರತೆಯ ಭಾವನೆಯನ್ನು ಮೂಡಿಸಿದವರು. ಭವ್ಯ ಭಾರತದ ಯೋಗ, ಧ್ಯಾನ, ಆಧ್ಯಾತ್ಮ ಹಾಗೂ ವೇದಾಂತದ ಪರಂಪರೆಯನ್ನು ಪ್ರಪಂಚಕ್ಕೆ ತಿಳಿಸಿ ಭಾರತದ ಛಾಪನ್ನು ಮೂಡಿಸಿದ ದಿವ್ಯಾತ್ಮ ಎಂದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ದೇವಿಪ್ರಸಾದ್ ಕಾರ್ಯಕ್ರಮವನ್ನು ಸಂಯೋಜಿಸಿ, ಸ್ವಾಗತಿಸಿದರು. ಸಾಂಸ್ಕೃತಿಕ ವೇದಿಕೆ ಸಂಚಾಲಕಿ ನಸೀಮಾ ಬೇಗಂ ಎಸ್. ವಂದಿಸಿದದರು. ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...