Wednesday, January 28, 2026

ಸಿದ್ದಕಟ್ಟೆ ಸ.ಪ್ರ.ದ. ಕಾಲೇಜು: ಮೃದು ಕೌಶಲ ತರಬೇತಿ

ಬಂಟ್ವಾಳ: ಸಿದ್ದಕಟ್ಟೆ ಸ.ಪ್ರ.ದ. ಕಾಲೇಜು ವಿದ್ಯಾರ್ಥಿಗಳಿಗೆ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಇಂಗ್ಲೀಷ್ ವಿಭಾಗದ ವತಿಯಿಂದ ಕಾಲೇಜಿನ ವಿದ್ಯಾರ್ಥಿಗಳಿಗೆ ಮೃದು ಕೌಶಲ ತರಬೇತಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಮೃದು ಕೌಶಲ ತರಬೇತಿದಾರರು ಹಾಗೂ ಮೂಡಬಿದ್ರೆ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿಕ್ರಮ ನಾಯಕ ಕೆ. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಗೋಲ್ ಸೆಟ್ಟಿಂಗ್ ಹಾಗೂ ಟೈಮ್ ಮ್ಯಾನೇಜ್ಮೆಂಟ್ ಎಂಬ ವಿಷಯದ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ನಾವು ನಮ್ಮ ಸಾಮರ್ಥ್ಯವನ್ನು ಅರಿತು ಸೂಕ್ತ ಗುರಿಯನ್ನು ನಿರ್ಧರಿಸಿಕೊಂಡು ಆ ನಿಟ್ಟಿನಲ್ಲಿ ಸಮಯವನ್ನು ಸರಿದೂಗಿಸಿ ಪ್ರಯತ್ನಿಸಬೇಕು ಎಂದರು. ತರಬೇತಿಯ ವಿಷಯವನ್ನು ವಿವಿಧ ದೃಷ್ಟಾಂತಗಳೊಂದಿಗೆ ವಿವರಿಸಿದ ಅವರು, ವಿದ್ಯಾರ್ಥಿಗಳಿಗೆ ಗುರಿಯನ್ನು ನಿರ್ಧರಿಸುವುದು ಹೇಗೆ ಮತ್ತು ಅದನ್ನು ತಲುಪುವಲ್ಲಿ ಪ್ರಯತ್ನಿಸುವುದು ಹೇಗೆ ಎಂಬುದನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಎಚ್. ಕೆ. ವಿದ್ಯಾರ್ಥಿ ಜೀವನ ಉತ್ತಮ ವಿಚಾರಗಳನ್ನು ಕಲಿಯಲು ಒಂದು ಸೂಕ್ತ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು,  ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸೂಕ್ತ ರೀತಿಯಲ್ಲಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನು ಗುರುತಿಸಿಕೊಂಡು, ಬೋಧಕರ ಮಾರ್ಗದರ್ಶನವನ್ನು ಪಡೆದು ಮುನ್ನಡೆಯಬೇಕು. ಆ ರೀತಿ ಪ್ರಯತ್ನಿಸಿದ ಎಲ್ಲರಿಗೂ ಯಶಸ್ಸು ಸಾಧ್ಯ ಎಂದರು.
ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಲೇಜಿನ ಆಂಗ್ಲ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿನಯ್ ಎಂ.ಎಸ್. ಸ್ವಾಗತಿಸಿ, ಪ್ರಥಮ ಬಿ ಎ ವಿದ್ಯಾರ್ಥಿ ಕಿಶೋರ್ ವಂದಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿನಿ ರಕ್ಷಾ ಪ್ರಾರ್ಥಿಸಿದರು. ಪ್ರಥಮ ಬಿಕಾಂ ವಿದ್ಯಾರ್ಥಿ ಪ್ರತೀಕ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...