Sunday, February 1, 2026

ಸಿದ್ಧಕಟ್ಟೆ ಸ.ಪ್ರ.ದ. ಕಾಲೇಜು: ವಾರ್ಷಿಕ ಕ್ರೀಡಾಕೂಟ

ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಇಂದು ಉದ್ಘಾಟನೆಗೊಂಡಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಎಸ್‌ಡಿಎಂ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೆಶಕ ಭರತ್ ಕುಮಾರ್ ಜೈನ್‌, ವಿದ್ಯಾರ್ಥಿಗಳು ಕ್ರೀಡೆಗಳ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಇದರಿಂದ ಮಾನಸಿಕ ಆರೋಗ್ಯ ಹಾಗೂ ಬೌದ್ಧಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಕ್ರೀಡೆಗಳ ಮೂಲಕ ರಾಷ್ಟ್ರಮಟ್ಟಗಳಲ್ಲಿ ಗುರುತಿಸಲ್ಪಡುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಸೋಲು ಗೆಲುವುಗಳು ಸಹಜ. ಸೋಲನ್ನು ಸಹಜವಾಗಿ ಸ್ವೀಕರಿಸಿ, ಕ್ರೀಡಾಸ್ಪೂರ್ತಿಯಲ್ಲಿ ಭಾಗವಹಿಸಿ ಕ್ರೀಡೋತ್ಸವವನ್ನು ಯಶಸ್ವಿಯಾಗಿಸಲು ಹೇಳಿದರು.
ನಿವೃತ್ತ ಶಿಕ್ಷಕ ನಾರಾಯಣ ನಾಯಕ್‌ರವರು ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಸಂಚಾಲಕ, ಕಾಲೇಜಿನ ಗ್ರಂಥಪಾಲಕ ಡಾ. ಶ್ರೀನಿವಾಸ, ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ನಸೀಮಾ ಬೇಗಂ ಎಸ್, ಶ್ರೀ ದೇವಿಪ್ರಸಾದ್, ಶ್ರೀ ಹನುಮಂತಯ್ಯ ಜಿ.ಹೆಚ್ ಹಾಗೂ ಶ್ರೀ ವಿನಯ್ ಎಂ.ಎಸ್ ಹಾಗೂ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವ ಸೂಚಿಸಿದರು.
ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಸೃಜನ್‌ ಕ್ರೀಡೆಗಳನ್ನು ನಡೆಸಿಕೊಟ್ಟರು. ರಕ್ಷಾ ಪ್ರಾರ್ಥಿಸಿ, ಸ್ವಾತಿ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಅಭಿಜಿತ್ ವಂದಿಸಿದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...