Thursday, February 13, 2025

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ರೈತ ನಿಧಿ ವಿತರಣೆ ಕಾರ್ಯಕ್ರಮ

ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸಾಲ ಪಡೆದುಕೊಂಡು ಆಕಸ್ಮಿಕ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದ ಸದಸ್ಯರಿಗೆ ಹಣಕಾಸು ನೆರವು ನೀಡುವ ರೈತನಿಧಿಯನ್ನು ಬೆಳ್ಳಿಪಾಡಿ ದಿ. ಕೃಷ್ಣ ರೈ ರೈತ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಗಬೆಟ್ಟು ಗ್ರಾ.ಪಂ ಅಧ್ಯಕ್ಷರಾದ ರಾಜೀವಿ ಪೂಜಾರಿ ವಿತರಿಸಿದರು.

ಮುಖ್ಯ ಅತಿಥಿಯಾಗಿದ್ದ ಸಿದ್ದಕಟ್ಟೆಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ ಮಾತಾನಾಡಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘವು ಕಳೆದ 75 ವರ್ಷಗಳ ಹಿಂದೆ ದಿ. ಕೃಷ್ಣ ರೈ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದು ರೈತರಿಗೆ ಅಗತ್ಯಕ್ಕೆ ತಕ್ಕಂತೆ ಸಾಲ ನೀಡುತ್ತಾ ಬಂದಿದೆ. ಇತ್ತೀಚಿನ ದಿನಗಳಲ್ಲಿ ಸಂಘವು ಆಟೋ-ರಿಕ್ಷಾ ನಿಲ್ದಾಣ , ಪ್ರಯಾಣಿಕರ ಬಸ್ಸು ತಂಗುದಾಣ , ಸೇರಿದಂತೆ ಹತ್ತು ಹಲವು ಸಮಾಜ ಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿರುವುದರಿಂದ,ಜಿಲ್ಲೆಯ ಇತರ ಸಹಕಾರಿ ಸಂಘಗಳಿಗೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಪ್ರಸ್ತಾವಿಕವಾಗಿ ಮಾತಾನಾಡಿ ಸಂಘದಲ್ಲಿ ಸಾಲ ಪಡೆದಿರುವ ರೈತರು ಆಕಸ್ಮಿಕವಾಗಿ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದರೆ ಅಂತಹ ಸಾಲಗಾರ ಸದಸ್ಯರ ಕುಟುಂಬಕ್ಕೆ ತಕ್ಕ ಮಟ್ಟಿನಲ್ಲಿ ನೆರವಾಗುವ ದೃಷ್ಠಿಯಲ್ಲಿ ಸದಸ್ಯರ ಕುಟುಂಬಕ್ಕೆ ಸಹಕಾರ ನೀಡುವ ಈ ರೈತ ನಿಧಿ ಯೋಜನೆಯನ್ನು 2023-24 ನೇ ಸಾಲಿನಿಂದ ಜಾರಿಗೆ ತರಲಾಗಿದ್ದು,ಸದ್ರಿ ಯೋಜನೆಯಲ್ಲಿ ಅರ್ಹರಾದ ಸದಸ್ಯರ ಕುಟುಂಬಗಳಿಗೆ ರೈತನಿಧಿ ನೀಡಲಾಗುತ್ತಿದ್ದು,ಮುಂದಿನ ದಿನಗಳಲ್ಲಿ ಈ ಮೊತ್ತವನ್ನು ಏರಿಸಲು ಚಿಂತನೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಿದ್ದಕಟ್ಟೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಎ ಗೋಪಿನಾಥ ರೈ, ಕುಕ್ಕಿಪಾಡಿ ಗ್ರಾ.ಪಂ ಅಧ್ಯಕ್ಷರಾದ ಶೇಖರ ಶೆಟ್ಟಿ ಬದ್ಯಾರ್, ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಪೂಜಾರಿ, ರೋಟರಿ ಕ್ಲಬ್ ಪಲ್ಗುಣಿ ಸಿದ್ದಕಟ್ಟೆ ಅಧ್ಯಕ್ಷರಾದ ಮೋಹನ್ ಜಿ ಮೂಲ್ಯ, ಸಂಗಬೆಟ್ಟು ಗ್ರಾ.ಪಂ ಉಪಾಧ್ಯಕ್ಷರಾದ ಸುರೇಶ್ ಕುಲಾಲ್, ಕುಕ್ಕಿಪಾಡಿ ಗ್ರಾ.ಪಂ ಉಪಾಧ್ಯಕ್ಷರಾದ ಬೇಬಿ ಪೂಜಾರ್ತಿ, ಬಂಟ್ವಾಳ ಭೂ ಅಭಿವೃದ್ದಿ ಬ್ಯಾಂಕಿನ ನಿರ್ದೇಶಕರಾದ ಲಿಂಗಪ್ಪ ಪೂಜಾರಿ ಹಲಾಯಿ , ಆರಂಬೋಡಿ ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಹುಲಿಮೇರು, ಸಂಘದ ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಲಕ್ಕೆ, ನಿರ್ದೇಶಕರಾದ, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ , ವೀರಪ್ಪ ಪರವ , ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಹರೀಶ್ ಆಚಾರ್ಯ , ಅರುಣಾ ಎಸ್ ಶೆಟ್ಟಿ , ಮಂದಾರತಿ ಎಸ್ ಶೆಟ್ಟಿ ,ಮಾಧವ ಶೆಟ್ಟಿಗಾರ್ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ನಿರ್ದೇಶಕಿ ಮಂದಾರತಿ ಎಸ್ ಶೆಟ್ಟಿ ಸ್ವಾಗತಿಸಿ , ಸಿಬ್ಬಂದಿ ಸುಭಾಸ್ ಕಾರ್ಯಕ್ರಮ ನಿರೂಪಿಸಿ ,ಧನ್ಯವಾದವಿತ್ತರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...