Wednesday, January 28, 2026

ಸೀಲ್ ಡೌನ್ ಆದ ಬಂಟ್ವಾಳಕ್ಕೆ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಭೇಟಿ

ಬಂಟ್ವಾಳ: ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಬುಧವಾರ ಬೆಳಗ್ಗೆ ಬಂಟ್ವಾಳ ಪೇಟೆಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಪರಾಮರ್ಶಿಸಿದರು. ಈ ವೇಳೆ ಪುರಸಭೆಯ ಸಹಾಯವಾಣಿಗೂ ಭೇಟಿ ನೀಡಿದ ಅವರು ಅಲ್ಲಿನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದರು. ಈಗಾಗಲೇ ಬಂಟ್ವಾಳ ಪೇಟೆಯ ಹೃದಯ ಭಾಗದಲ್ಲಿರುವ ಪ್ರದೇಶದಲ್ಲಿ ಕೋವಿಡ್ ನಿಂದ ಒಬ್ಬರು ಮೃತಪಟ್ಟಿದ್ದು, ಮತ್ತೊಬ್ಬರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶದ ಸುತ್ತಮುತ್ತಲು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗಿದೆ.

ಈ ಜಾಗದಲ್ಲಿ ವಾಸಿಸುವ ವಾಸಿಸುವವರಿಗೆ ದೂರವಾಣಿ ಸಂಖ್ಯೆ ಇರುವ ಕರಪತ್ರವನ್ನು ನೀಡಲಾಗಿದ್ದು, ಪುರಸಭೆ ಸಹಾಯವಾಣಿಯ ಸಂಖ್ಯೆಯನ್ನೂ ಒದಗಿಸಲಾಗಿದೆ. ಇದರ ಕಾರ್ಯಚಟುವಟಿಕೆಗಳನ್ನು ಜಿಲ್ಲಾಧಿಕಾರಿ ವೀಕ್ಷಿಸಿ ತೃಪ್ತಿ ವ್ಯಕ್ತಪಡಿಸಿದರು. ಇದೇ ಸಂದರ್ಭ ಕಂಟೈನ್ಮೆಂಟ್ ಪ್ರದೇಶದ ವ್ಯಾಪ್ತಿಯಲ್ಲಿ ಇರುವ ರೇಶನ್ ಅಂಗಡಿಗಳನ್ನು ಅದರ ಹೊರಗಿನ ಭಾಗಕ್ಕೆ ಸ್ಥಳಾಂತರಗೊಳಿಸುವಂತೆ ಅವರು ಸೂಚನೆ ನೀಡಿದರು.

ಪ್ರೊಬೆಶನರಿ ಐಎಎಸ್ ಅಧಿಕಾರಿ ರಾಹುಲ್ ಶಿಂಧೆ, ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್., ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್, ಎಸ್ಸೈ ಅವಿನಾಶ್, ಕಂದಾಯ ನಿರೀಕ್ಷಕರಾದ ರಾಮ ಕಾಟಿಪಳ್ಳ, ನವೀನ್ ಬೆಂಜನಪದವು, ವಿಎ ರಾಜು ಲಮಾಣಿ, ಜನಾರ್ದನ ಸಹಿತ ಕಂದಾಯ, ಆರೋಗ್ಯ, ಪುರಸಭೆ, ಪೊಲೀಸ್ ಅಧಿಕಾರಿ, ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದು ಪೂರಕ ಮಾಹಿತಿ ನೀಡಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...