Saturday, February 8, 2025

ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ವಾರ್ಷಿಕ ಜಾತ್ರೆ, ಆಶ್ಲೇಷ ಬಲಿ

ಬಂಟ್ವಾಳ: ಬಂಟ್ವಾಳ ತಾಲೂಕಿನ ಏಕೈಕ ಆಲಡೆ ಎಂದು ಪ್ರಸಿದ್ಧಿ ಹೊಂದಿದ ಮೂಡುಪಡುಕೋಡಿ ಗ್ರಾಮದ ಸಿರಿಗುಂಡದಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಸೋಮವಾರ ನಡೆಯಿತು.
ಜ. 20ರಂದು ವೇ.ಮೂ. ನಡ್ವಂತಾಡಿ ಬಾಲಕೃಷ್ಣ ಪಾಂಗಣ್ಣಾಯ ಮತ್ತು ದೇವಸ್ಥಾನದ ಪ್ರ. ಅರ್ಚಕ ಗೋಪಾಲಕೃಷ್ಣ ಭಟ್ ಅವರ ನೇತೃತ್ವದಲ್ಲಿ ಬೆಳಗ್ಗೆ ತೋರಣ ಮುಹೂರ್ತ, ಗೋಪೂಜೆ, ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಸಂಜೆ ಉಪ್ಪಿರ ಜೈ ಭಾರತ್ ಮಾತಾ ಭಜನ ಮಂಡಳಿಯಿಂದ ಭಜನೆ ಕಾರ್ಯಕ್ರಮ ನಡೆಯಿತು.
ಸೋಮವಾರ ಬೆಳಗ್ಗೆ ಕಜೆ ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ದೀಪ ಬೆಳಗಿಸಿ ಪ್ರಾರ್ಥನೆ, ವೈದಿಕ ಕಾರ್ಯಕ್ರಮ, ಆಶ್ಲೇಷ ಬಲಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ಸಮಿತಿ ಅಧ್ಯಕ್ಷ ಮೋಹನ್ ಶೆಟ್ಟಿ ನರ್‍ವಲ್ದಡ್ಡ ಮತ್ತು ಪದಾಧಿಕಾರಿಗಳಾದ ಶಂಕರ ಶೆಟ್ಟಿ ಬೆದ್ರ್‌ಮಾರು, ಸತೀಶ್ ಸಪಲ್ಯ ಮುಂಡಬಲು, ಡಿ.ಎಸ್. ಬೋಳೂರು, ಲೋಕನಾಥ ಶೆಟ್ಟಿ, ಡಾ| ರಾಮಕೃಷ್ಣ ಎಸ್. ಸನಂಗುಳಿ, ಕೆ. ಬೂಬ ಪೂಜಾರಿ, ಗಣೇಶ್ ಶೆಟ್ಟಿ, ಮಂಜುನಾಥ ಪೂಜಾರಿ ಮುಂಡಬಲು, ಸುಧೀರ್ ಶೆಟ್ಟಿ ಎರ್ಮೆನಾಡು, ದಯಾನಂದ ನಾಯ್ಕ, ಹರೀಶ್ ಶೆಟ್ಟಿ, ಮುರಳೀಧರ ಕೆದಿಲಾಯ, ಗಿರಿಜಾ ಶಂಕರ್ ಭಟ್ ಬಡಕೈಕೊಂಬು, ಕೊರಗ ಶೆಟ್ಟಿ ನರ್‍ವಲ್ದಡ್ಡ, ಬೂಬ ಸಪಲ್ಯ ಮುಂಡಬಲು, ವಸಂತ ಶೆಟ್ಟಿ ಕೇದಗೆ, ಡಾ| ಶಿವಪ್ರಸಾದ್ ಭಟ್ ಸನಂಗುಳಿ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...