ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ ಮತ್ತು ಉಡುಪಿ ಇದರ ಬಂಟ್ವಾಳ ವಲಯದ ವತಿಯಿಂದ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿಯನ್ನು ಆಚರಿಸಲಾಯಿತು.



ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಸ್ವಚ್ಛತಾ ಕಾರ್ಯ ಮತ್ತು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಸದಸ್ಯರು ಭಾಗಿಯಾಗಿದ್ದರು.












