ಬಂಟ್ವಾಳ: ದ.ಕ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮಾಣಿ ಗ್ರಾಮ ಪಂಚಾಯತ್ ಇದರ ಜಂಟಿ ಆಶ್ರಯದಲ್ಲಿ ಸೂರಿಕುಮೇರು ಅಂಗನವಾಡಿ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ ಮಾದವ ಮಾವೆ, ಸ್ಥಳೀಯ ಚರ್ಚಿನ ಧರ್ಮ ಗುರು ಗ್ರೆಗೊರಿ ಪಿರೇರಾ, ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಅಲಿ, ಸದಸ್ಯೆ ಮಂಜುಳಾ ಕುಶಲ ಪೆರಾಜೆ, ಪಂಚಾಯತ್ ಅಧ್ಯಕ್ಷೆ ಮಮತಾ ಎಸ್. ಶೆಟ್ಟಿ, ಸದಸ್ಯರಾದ ಸುದೀಪ್ ಕುಮಾರ್ ಶೆಟ್ಟಿ, ಇಬ್ರಾಹಿಂ ಕೆ. ಮಾಣಿ, ಗಣೇಶ್ ರೈ ಮಾಣಿ, ನಾರಾಯಣ ಶೆಟ್ಟಿ, ರಮಣಿ ಡಿ. ಪೂಜಾರಿ, ಪ್ರೀತಿ ಡಿನ್ನ ಪಿರೇರಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ ಜೋಶಿ, ಅಂಗನವಾಡಿ ಶಿಕ್ಷಕಿ ಶಶಿಕಲಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಝುಬೈದಾ ಯೂಸುಫ್ ಉಪಸ್ಥಿತರಿದ್ದರು.

