Friday, June 27, 2025

ಸೂರಿಕುಮೇರು: ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ 65 ಬಡಕುಟುಂಬಗಳಿಗೆಶಾಸಕ ರಾಜೇಶ್ ನಾಯ್ಕ್ ಅವರ ವೈಯಕ್ತಿಕ ನಿಧಿಯಿಂದ ದಿನಬಳಕೆಯ ಅಗತ್ಯ ಆಹಾರ ಸಾಮಾಗ್ರಿಗಳ ವಿತರಣೆ

ಬಂಟ್ವಾಳ : ಸೂರಿಕುಮೇರುನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯ 65 ಬಡಕುಟುಂಬಗಳಿಗೆ ಶಾಸಕ ರಾಜೇಶ್ ನಾಯ್ಕ್ ಅವರ ವೈಯಕ್ತಿಕ ನಿಧಿಯಿಂದ ದಿನಬಳಕೆಯ ಅಗತ್ಯ ಆಹಾರ ಸಾಮಾಗ್ರಿಗಳನ್ನು ಬುಧವಾರ ವಿತರಿಸಲಾಯಿತು. ಸೂರಿಕುಮೇರು ಬೊರಿಮಾರ್ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಣಿ ಗ್ರಾಮಪಂಚಾಯತ್ ಅಧ್ಯಕ್ಷೆ ಮಮತಾ ಶೆಟ್ಟಿ ,ನೇರಳಕಟ್ಟೆ ವ್ಯ.ಸೇ.ಸಹಕಾರಿ ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಪ್ರಮುಖರಾದ ತೋಟ ನಾರಾಯಣ ಶೆಟ್ಟಿ, ನರಸಿಂಹ ಮಾಣಿ, ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ಎಲಿಯಾಸ್ ಪಿರೇರಾ, ಕಾರ್ಯದರ್ಶಿ ಮೇರಿ ಡಿ’ಸೋಜಾ, ಧರ್ಮಭಗಿನಿ‌ ನ್ಯಾನ್ಸಿ ಕಿಟ್ ಗಳನ್ನು ವಿತರಿಸಿದರು. ಪಾಲನಾ ಸಮಿತಿಯ ಎಲ್ಲ ಸದಸ್ಯರು ಉಪಸ್ಥಿತರಿದ್ದು, ಚರ್ಚ್ ಮೇಲೆ ಪ್ರೀತಿ ಇಟ್ಟು ಕಿಟ್ ಗಳನ್ನು ಕೊಡುಗೆಯಾಗಿ‌ ನೀಡಿದ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನೆ ಸಲ್ಲಿಸಿದರು.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...