Thursday, February 13, 2025

ಸೌಜನ್ಯಾ ಅತ್ಯಾಚಾರ ಕೊಲೆ ಪ್ರಕರಣ : ಸರ್ಕಾರ, ಸಿಬಿಐಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮೃತಳ ಸಂಬಂಧಿ ಚಂದಪ್ಪಗೌಡ ಸಲ್ಲಿಸಿದ್ದ ತಕರಾರು ಅರ್ಜಿ ಕುರಿತು ನ್ಯಾಯಮೂರ್ತಿ ಕೆ.ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನಂತರ ಅರ್ಜಿಯಲ್ಲಿ ಪ್ರತಿವಾದಿಯಾಗಿರುವ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಸಿಐಡಿ ಎಡಿಜಿಪಿ, ಅಪರಾಧ ಮತ್ತು ತಾಂತ್ರಿಕ ಸೇವಗಳ ವಿಭಾಗದ ಎಡಿಜಿಪಿ, ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ, ಸಿಐಡಿ ಉಪ ಪೊಲೀಸ್‌ ವರಿಷ್ಠಾಧಿಕಾರಿ, ಬೆಳ್ತಂಗಡಿ ಪೊಲೀಸ್‌ ಠಾಣಾಧಿಕಾರಿ ಮತ್ತು ಸಿಬಿಐಗೆ ನೋಟಿಸ್‌ ಜಾರಿಗೊಳಿಸಿತು.

ಅಲ್ಲದೆ, ಪ್ರಕರಣದಿಂದ ಸಂತೋಷ್‌ ರಾವ್‌ ಅನ್ನು ಖುಲಾಸೆಗೊಳಿಸಿ ವಿಚಾರಣ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್‌ ಮೇಲ್ಮನವಿ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಾಕಿಯಿದೆ. ಮೇಲ್ಮನವಿಯೊಂದಿಗೆ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಅರ್ಜಿದಾರರು ಪರ ವಕೀಲರು ಮನವಿ ಮಾಡಿದರು.ಅದನ್ನು ಪರಿಗಣಿಸಿರುವ ನ್ಯಾಯಪೀಠ, ಸೂಕ್ತ ವಿಭಾಗೀಯ ನ್ಯಾಯಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿಗಳಿಂದ ಅನುಮತಿ ಪಡೆಯುವಂತೆ ರಿಜಿಸ್ಟ್ರಿಗೆ ಸೂಚಿಸಿತು. ಖುಲಾಸೆಯಾಗಿರುವ ಸಂತೋಷ್‌ ರಾವ್‌ ಅನ್ನೂ ಪ್ರತಿವಾದಿ ಮಾಡಲಾಗಿದೆ.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...