ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನ ಶಿರಸಿ, ಶ್ರೀಮದ್ಭಗವದ್ಗೀತಾ ಅಭಿಯಾನ ಸಮಿತಿ ದಕ್ಷಿಣ ಕನ್ನಡ, ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮದ್ ಭಗವದ್ಗೀತಾ ಅಭಿಯಾನದ ಅಂಗವಾಗಿ ಪದವಿಪೂರ್ವ ವಿದ್ಯಾರ್ಥಿಗಳಿಗೆ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗೀತಾ ಕಂಠಪಾಠ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜು ಕಲ್ಲಡ್ಕದ ದ್ವಿತೀಯ ವಿಭಾಗದ ಕುಮಾರಿ ಅನಘಾ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


