Friday, June 27, 2025

ಎಸ್.ಎಸ್.ಎಲ್.ಸಿ. ಪ್ರಥಮ ಪರೀಕ್ಷೆ ಮುಕ್ತಾಯ

ಬಂಟ್ವಾಳ : ಗುರುವಾರ ಆರಂಭಗೊಂಡಿರುವ ಎಸೆಸೆಲ್ಸಿ ಪರೀಕ್ಷೆಯ ಮೊದಲ ದಿನದ ಇಂಗ್ಲಿಷ್ ಪರೀಕ್ಷೆ ಮುಕ್ತಾಯಗೊಂಡಿದೆ. ಪರೀಕ್ಷೆ ಮುಗಿಸಿ ಮರಳಿ ತೆರಳುವ ವೇಳೆಯಲ್ಲಿಯೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು,  ಕೇಂದ್ರಗಳಿಂದ ಹೊರಟ ವಿದ್ಯಾರ್ಥಿಗಳು ವಾಹನಗಳನ್ನು ಏರುವವರೆಗೂ ನಿಯೋಜಿತ ಶಿಕ್ಷಕ ವೃಂದ ಅಧಿಕಾರಿಗಳ ತಂಡ ಹೆಚ್ಚಿನ ಮುತುವರ್ಜಿ ವಹಿಸಿತ್ತು.

ಕಾಲ್ನಡಿಗೆ, ಸ್ವಂತ ವಾಹನ ಮತ್ತು ಸಾರ್ವಜನಿಕ ವಾಹನಗಳನ್ನು ಅವಲಂಬಿಸಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಗುಂಪುಗುಂಪಾಗಿ ನಿಲ್ಲುತ್ತಿದ್ದು, ಅವರನ್ನು ಶಿಕ್ಷಕರು ಹಾಗೂ ಸಂಚಾರಿ ಪೊಲೀಸರು ಚದುರಿ ನಿಂತು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುತ್ತಿದ್ದ ಘಟನೆಯೂ ನಡೆಯಿತು.

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ..

ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ, ಮಹಾರುದ್ರಾಭಿಷೇಕ ಮತ್ತು ವಿಶೇಷ...