Tuesday, July 15, 2025

ಬಂಟ್ವಾಳ: ಎಸ್.ಎಸ್.ಎಲ್.ಸಿ. ಪರೀಕ್ಷೆಯ ಸಿದ್ಧತಾ ಪೂರ್ವಭಾವಿ ಸಭೆ

ಬಂಟ್ವಾಳ: ಜೂನ್ 25 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ಧತಾ ಪೂರ್ವಬಾವಿ ಸಭೆಯು ಇಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಬಂಟ್ವಾಳ ತಾಲೂಕಿನಲ್ಲಿ 5,200 ವಿದ್ಯಾರ್ಥಿಗಳು 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ಶಿಕ್ಷಕರ ಜೊತೆ ಇತರ ಇಲಾಖಾಧಿಕಾರಿಗಳು ಸಹಕರಿಸುವಂತೆ ಶಾಸಕರು ಸೂಚಿಸಿದರು. ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ, ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಚರ್ಚಿಸಲಾಯಿತು. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ, ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು.

ಈ ವ್ಯವಸ್ಥೆಗಳಿಗೆ ಶಿಕ್ಷಕರಿಗೆ ಪ್ರತ್ಯೇಕ ಜವಬ್ದಾರಿಯನ್ನು ನೀಡಲಾಯಿತು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮತ್ತು ಹೆತ್ತವರು ಯಾವುದೇ ರೀತಿಯಲ್ಲಿ ಭಯಭೀತರಾಗುವ ಅವಶ್ಯಕತೆಯಿಲ್ಲ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ನಿಗಾವಹಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ತಹಶೀಲ್ದಾರರಾದ ರಶ್ಮಿ ಎಸ್.ಆರ್., ತಾ.ಪಂ. ಉಪಾಧ್ಯಕ್ಷ ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ ಉಪಸ್ಥಿತರಿದ್ದರು.

More from the blog

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...