Tuesday, January 27, 2026

ಎಸ್ಸೆಸ್ಸೆಲ್ಸಿ ಮರುಮೌಲ್ಯಮಾಪನ: 12 ಅಂಕಗಳ ಸೇರ್ಪಡೆ

ವಿಟ್ಲ: ವಿಟ್ಲ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಸ್ಪೂರ್ತಿ ರೈ ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನದಲ್ಲಿ 12 ಅಂಕಗಳನ್ನು ಹೆಚ್ಚುವರಿಯಾಗಿ ಪಡೆದಿದ್ದಾರೆ. ಈ ಮೊದಲ ಫಲಿತಾಂಶದಲ್ಲಿ ಆಕೆ 597 ಅಂಕಗಳನ್ನು ಪಡೆದಿದ್ದರು. ಆಕೆ ಎರಡು ವಿಷಯವನ್ನು ಮರು ಮೌಲ್ಯಮಾಪನಕ್ಕೆ ಹಾಕಿದ್ದು, 12 ಅಂಕಗಳೊಂದಿಗೆ ಒಟ್ಟು 609(97..44%)ಅಂಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಉತ್ತಮ ಕ್ರೀಡಾಪಟು ಆಗಿರುವ ಆಕೆ 2019ರಲ್ಲಿ ಮಧ್ಯಪ್ರದೇಶದಲ್ಲಿ ನಡೆದ 17 ವರ್ಷದೊಳಗಿನ ರಾಷ್ಟ್ರಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿಪದಕ ಹಾಗೂ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಚಿನ್ನದ ಪದಕ ಗಳಿಸಿರುವ ಈಕೆ ವಿಟ್ಲದ ಇಂಜಿನಿಯರ್ ಭಾಸ್ಕರ್ ರೈ ಮತ್ತು ಶಾರದಾ ದಂಪತಿಗಳ ಪುತ್ರಿಯಾಗಿದ್ದಾರೆ.

 

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...