Thursday, June 26, 2025

ಮಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

ಮಂಗಳೂರು: ಜೂನ್ 25 ರಿಂದ ಜುಲೈ 4 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿದ್ದು, ಈ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಮತ್ತು ಪಾರದರ್ಶಕತೆಯಿಂದ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144ರನ್ವಯ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸಿಂಧೂ ರೂಪೇಶ್ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ವಸ್ತುಗಳನ್ನು ಹಂಚುವುದು, ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯಾವುದೇ ವಿಷಯಗಳನ್ನು /ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.

ಈ ಆದೇಶವು ನಿಷೇಧಾಜ್ಷೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...