ಬಂಟ್ವಾಳ: ಬಂಟ್ವಾಳ ದೇವಳ ಅಂಗ್ಲ ಮಾಧ್ಯಮ ಶಾಲೆ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ .100 ಫಲಿತಾಂಶ ಬಂದಿರುತ್ತದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

73 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ18 ಮಂದಿ ಡಿಸ್ಟಿಂಕ್ಷನ್ 23 ಮಂದಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ವಿದ್ಯಾರ್ಥಿಗಳಾದ ಈಶಾ ಜೈನ್ 615,ಕೃತಿ 614, ಅದ್ವೀತಿ ಜಿ.ಶೆಟ್ಟಿ 611ಹಾಗೂ ಧನ್ಯಶ್ರೀ 600 ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿ ಗಳೆಲ್ಲರಿಗೂ ಶಾಲಾ ಆಡಳಿತ ಮಂಡಳಿ,ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದೆ.