ಬೆಂಗಳೂರು: ಹತ್ತನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಕ್ಟೋಬರ್ 25 ರಂದು ಪ್ರಕಟಿಸುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೂಚನೆ ನೀಡಿದೆ

ಸೆ.24ರಿಂದ ಸೆ.30ರವರೆಗೆ ನಡೆದಿದ್ದ ಪರೀಕ್ಷೆಯ ಫಲಿತಾಂಶವನ್ನು ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸುವ ಬಗ್ಗೆ ಈ ಮೊದಲು ಚಿಂತನೆ ನಡೆಸಲಾಗಿತ್ತು. ಆದರೆ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ದಸರಾ ರಜೆಯ ಅವಧಿಯಲ್ಲಿ ಮೌಲ್ಯಮಾಪನ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ ಕಾರಣ ರಜಾ ಅವಧಿ ಮುಕ್ತಾಯಗೊಂಡ ಬಳಿಕ ಮೌಲ್ಯಮಾಪನ ನಡೆಸುವಂತೆ ಮಂಡಳಿ ಸೂಚಿಸಿದೆ.