Monday, January 26, 2026

ಎಸ್.ಎಸ್.ಎಲ್.ಸಿ: ಮರುಮೌಲ್ಯ ಮಾಪನದಿಂದ ಹಿಂದಿಯಲ್ಲಿ ನೂರು ಅಂಕಗಳಿಸಿದ ವಿಕ್ರಮ್ ಶೆಟ್ಟಿ: ಬೆಳ್ತಂಗಡಿ ತಾಲ್ಲೂಕಿಗೆ ಪ್ರಥಮ ಸ್ಥಾನ

 

ಉಜಿರೆ: ಹಿಂದಿಯಲ್ಲಿ ಮರುಮೌಲ್ಯ ಮಾಪನದ ಬಳಿಕ ಉಜಿರೆಯಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) ವಿದ್ಯಾರ್ಥಿ ವಿಕ್ರಮ್ 100ರಲ್ಲಿ 100 ಅಂಕಗಳಿಸಿರುತ್ತಾನೆ.

ಒಟ್ಟು 625 ಅಂಕಗಳಲ್ಲಿ 622 ಅಂಕ ಪಡೆದ ಆತ ಬೆಳ್ತಂಗಡಿ ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ ನಾಲ್ಕನೆ ಸ್ಥಾನ ಪಡೆದಿರುತ್ತಾನೆ.

ಆತ ಪಡೆದ ಅಂಕಗಳು: ಕನ್ನಡ:125. ಇಂಗ್ಲೀಷ್: 99. ಹಿಂದಿ:100. ಗಣಿತ: 100. ವಿಜ್ಞಾನ: 99. ಸಮಾಜ ವಿಜ್ಞಾನ:99. ಒಟ್ಟು ಅಂಕಗಳು: 625ರಲ್ಲಿ 622

ಕನ್ಯಾಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ವೀರಣ್ಣ ಶೆಟ್ಟಿ ಹಾಗೂ ಧರ್ಮಸ್ಥಳದ ಎಸ್.ಡಿ.ಎಂ.ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಅಮೃತಾ ವಿ.ಶೆಟ್ಟಿದಂಪತಿಯ ಮಗ ವಿಕ್ರಮ್ ಶೆಟ್ಟಿ.

 

More from the blog

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...