ಬಂಟ್ವಾಳ: ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಎಸೆಸೆಲ್ಸಿ ಅನಂತರದ ಶೈಕ್ಷಣಿಕ ಸಾಧನೆಯ ದೃಷ್ಟಿಯಿಂದ ಎಸೆಸೆಲ್ಸಿ ನಂತರ ಮುಂದೆ ಏನು.?, ಹೇಗೆ.? ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಮಾಹಿತಿ ಕಾರ್ಯಕ್ರಮ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ್ ಆಳ್ವ ಅವರ ಉಪಸ್ಥಿತಿಯಲ್ಲಿ ಮಾ. ೨೧ರಂದು ಸಂಜೆ ೪ಕ್ಕೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ ನಡೆಯಲಿದೆ ಎಂದು ಪ್ರತಿಷ್ಠಾನದ ಪ್ರಕಟನೆ ತಿಳಿಸಿದೆ.
