Monday, February 2, 2026

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಹೃದಘಾತದಿಂದ ಸಾವು

  1. ಬಂಟ್ವಾಳ : ಪರೀಕ್ಷೆ ಬರೆಯಲು ತಯಾರಾಗಿದ್ದ ಬಿಕಾಂ  ವಿದ್ಯಾರ್ಥಿಯೋರ್ವ ಹೃದಯಘಾತದಿಂದ ಸಾವನಪ್ಪಿದ ಘಟನೆ ಏ.17 ರ ಶನಿವಾರ ಬಂಟ್ವಾಳ ತಾಲೂಕಿನ ನಂದಾವರದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಸುಳ್ಯದ ಅಜ್ಜಾವರದ ಇರುವಂಬಳ್ಳ ಹಸೈನಾರ್ ಅವರ ಪುತ್ರ ಸಿನಾನ್ (20)  ಮೃತಪಟ್ಟ ವಿದ್ಯಾರ್ಥಿ.

ಸಿನಾನ್ ತನ್ನ ಪದವಿ ಶಿಕ್ಷಣದ ಜತೆಯಲ್ಲೇ ಕುಂಬ್ರದ ಕಾಲೇಜೊಂದರಲ್ಲಿ ಧಾರ್ಮಿಕ ಶಿಕ್ಷಣವನ್ನು ಅಧ್ಯಯನ ಮಾಡುತ್ತಿದ್ದ.

ಮಂಗಳೂರಿನಲ್ಲಿ ಶನಿವಾರ ನಡೆಯಬೇಕಾಗಿದ್ದ ಬಿಕಾಂ ಪದವಿಗೆ ಸಂಬಂಧಿಸಿದ ಪರೀಕ್ಷೆಗೆ ತಯಾರಿ ನಡೆಸಿ , ಪರೀಕ್ಷೆ ಎದುರಿಸಲೆಂದು ಶುಕ್ರವಾರ ಸಿನಾನ್ ಪಾಣೆಮಂಗಳೂರು ನಂದಾವರದಲ್ಲಿರುವ ತನ್ನ ಸಂಬಂಧಿಕರ ಮನೆಗೆ ತೆರಳಿ ಉಳಿದುಕೊಂಡಿದ್ದ. ಇಂದು ಬೆಳಗ್ಗೆ ಪರೀಕ್ಷೆಗೆ ಹೊರಡುವ ತಯಾರಿಯಲ್ಲಿದ್ದಾಗ ಸಿನಾನ್ ಗೆ ಇಂದು ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆಂದು ತಿಳಿದು ಬಂದಿದೆ.

More from the blog

Panemangaluru : ಸ್ಕೂಟರ್ ಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಬಂಟ್ವಾಳ: ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಸ್ಕೂಟರ್ ಸವಾರ ನರಿಕೊಂಬು ನಿವಾಸಿ ಮುಸ್ತಫಾ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಸ್ಕೂಟರ್ ಸವಾರ ಮುಸ್ತಫಾ ಅವರು ನರಿಕೊಂಬು ರಸ್ತೆಯಿಂದ...

ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಗಾನ ತಾಳಮದ್ದಳೆ

ವಿಟ್ಲ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಯಕ್ಷಕಲಾ ಪ್ರತಿಷ್ಠಾನ ಪುಣಚ ಇವರಿಂದ ಮಾಸಿಕ 'ರಾವಣ ವಧೆ' ತಾಳಮದ್ದಳೆ ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬಟ್ಯಮೂಲೆ ಲಕ್ಷ್ಮೀನಾರಾಯಣ ಭಟ್. ಚೆಂಡೆ ಮದ್ದಳೆಯಲ್ಲಿ ಡಾ. ಶ್ರೀ ಪ್ರಕಾಶ್ ಬಂಗಾರಡ್ಕ...

ವಿಕಸಿತ ಭಾರತಕ್ಕೆ ಭದ್ರ ತಳಹದಿ : ನಳಿನ್‌ ಕುಮಾರ್ ಕಟೀಲ್

ಮಂಗಳೂರು : ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ. ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ...

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...