Wednesday, February 4, 2026

ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಪತ್ತೆಯಾಗಿದೆ.

ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ ಕೊಳೆತ ಸ್ಥಿತಿಯಲ್ಲಿ ದೊರೆತಿದ್ದು, ಕುತ್ತಿಗೆಯಲ್ಲಿ ಚೈನ್, ಒಳ ಉಡುಪು ಆಧಾರದಲ್ಲಿ ಲಿಖಿತ್ ಎಂದು ಗುರುತಿಸಲಾಗಿದೆ.

ಲಿಖಿತ್ ಅವರ ಮೃತದೇಹವನ್ನು ಉಪ್ಪಳದ ಮೀನುಗಾರರು ದಡಕ್ಕೆ ತಲುಪಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರು ಮಂಗಲ್ಪಾಡಿಯ ಸರ್ಕಾರಿ ಆಸ್ಪತ್ರೆಯಲ್ಲಿ ಮಹಜರು ನಡೆಸಿ ಸಂಬಂಧಪಟ್ಟ ಪಣಂಬೂರು ಠಾಣೆಗೆ ಮಾಹಿತಿ ನೀಡಿದ್ದಾರೆ.

ಕಳೆದ ಭಾನುವಾರ ಪೊರ್ಕೋಡಿಯ ಸ್ನೇಹಿತರಾದ ನಾಗರಾಜ್‌, ಮಿಲನ್‌ ಹಾಗೂ ಲಿಖಿತ್‌ ಅವರು ಜನಪದ ಪರಿಷತ್‌ ರಸಮಂಜರಿ ಕಾರ್ಯಕ್ರಮ ವೀಕ್ಷಣೆಗೆಂದು ಬಂದಿದ್ದರು. ಬಳಿಕ ಸಮುದ್ರದಲ್ಲಿ ಅವರೆಲ್ಲರೂ ಈಜಾಟ ನಡೆಸುತ್ತಿದ್ದರು. ಈ ವೇಳೆ ಭಾರೀ ಗಾಳಿಯಿಂದಾಗಿ ಅಲೆಗಳು ಅಪ್ಪಳಿಸಿದ್ದು, ಮೂವರು ಮುಳುಗಿ ನಾಪತ್ತೆಯಾಗಿದ್ದರು. ತಕ್ಷಣ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಯಿತು. ಇನ್ನು ಮಾರ್ಚ್ 4ರಂದು ವಿದ್ಯಾರ್ಥಿಗಳಾದ ನಾಗರಾಜ್‌, ಮಿಲನ್‌ ಅವರ್ ಮೃತದೇಹ ಪಣಂಬೂರಿನಲ್ಲಿ ಪತ್ತೆಯಾಗಿತ್ತು.

More from the blog

ಮತ್ತೆ ಚಿನ್ನದ ಬೆಲೆ ಕುಸಿತ ! ಇಂದಿನ ದರ ಎಷ್ಟಿದೆ ಗೊತ್ತಾ?

ಮಂಗಳೂರು: ಕಳೆದ ಕೆಲವು ದಿನಗಳಿಂದ ದಾಖಲೆಯ ಮಟ್ಟಕ್ಕೆ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಈಗ ಸತತವಾಗಿ ಇಳಿಕೆ ಕಾಣುತ್ತಿವೆ. ಫೆಬ್ರವರಿ 3 2026, ಮಂಗಳವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್‌ನ ಚಿನ್ನದ ಬೆಲೆಯು...

ರಾಜ್ಯದ ರೈಲ್ವೆ ಯೋಜನೆಗಳಿಗೆ 7748 ಕೋಟಿ ರೂ. ಅನುದಾನ : ಸಚಿವ ವಿ.ಸೋಮಣ್ಣ

ಬೆಂಗಳೂರು : ರಾಜ್ಯದ ರೈಲ್ವೆ ಯೋಜನೆಗಳಿಗೆ ಬಜೆಟ್‌ನಲ್ಲಿ 7748 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಈ ವಿಚಾರವಾಗಿ ಮಾಹಿತಿ ನೀಡಿದ ಅವರು, 2009ರಿಂದ...

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಸಂಸದ ಕ್ಯಾ. ಚೌಟ ಮನವಿ

ನವದೆಹಲಿ: ಭಾರತದ ಗ್ರೀನ್‌ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ ('ಸಮುದ್ರ ತೀರದ ಪವನ ಶಕ್ತಿ' Offshore Wind Energy)...

ಅಂಗಡಿ, ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ – ದರ್ಶನ್ ಎಚ್. ವಿ

ಮಂಗಳೂರು : ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು ಹೋಟೇಲ್ ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಹೆಸರನ್ನು ನಾಮಫಲಕಗಳಲ್ಲಿ ಕನ್ನಡದಲ್ಲಿ ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾಧಿಕಾರಿ...