Wednesday, February 12, 2025

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

ಸುಬ್ರಮಣ್ಯ: ಕರ್ನಾಟಕದ ಸಾಂಸ್ಕೃತಿಕ ನಾಯಕ, ಜಗಜ್ಯೋತಿ, ವಿಶ್ವಗುರು ಬಸವಣ್ಣನವರ ಭಾವಚಿತ್ರವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಚೇರಿಯ ಆವರಣದಲ್ಲಿ ಇಂದು ಶನಿವಾರ ಅನಾವರಣಗೊಳಿಸಲಾಯಿತು.

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೇ ಸುಜಾತ ಕಲ್ಲಾಜೆ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ಅವರು ಮಾತನಾಡಿ 12ನೇ ಶತಮಾನದಲ್ಲಿ ಕ್ರಾಂತಿಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ, ಮತ್ತು ವರ್ಗ ರಹಿತ ಸಮಾಜ, ಜೀವನ ಮಾರ್ಗ, ಸರ್ವಕಾಲಕ್ಕೂ ದಾರಿದೀಪವಾಗಿದೆ. ಅಲ್ಲದೆ ಜಗಜ್ಯೋತಿ ಬಸವಣ್ಣ ನವರು ಸಾರ್ವತ್ರಿಕ ಮತ್ತು ಸರ್ವಕಾಲಿಕ ,ಸರ್ವಜನ, ಸಮಭಾವದ , ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜವನ್ನು ಕಟ್ಟುವುದಕ್ಕೆ ಬೇಕಾದ ನೀತಿಯನ್ನು ಬೋಧಿಸಿರುವರು ಎಂದು ನುಡಿದರು.

ಇದೇ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಅವರು ಮಾತನಾಡಿ ವಿಶ್ವಗುರು ಬಸವಣ್ಣನವರು ಅವರ ಸರಳ ಸಜ್ಜನಿಕೆಯ ಜೀವನದ ಮೌಲ್ಯಗಳನ್ನ ನಾವೆಲ್ಲರೂ ಪಾಲಿಸೋಣ ,ಅವರು ಸಮಾಜಕ್ಕೆ ನೀಡಿದ ಏಕತೆಯ ಸಂದೇಶಗಳನ್ನ ಅನುಸರಿಸೋಣ ಎಂದರು

ಈ ಸಂದರ್ಭದಲ್ಲಿ ಸುಬ್ರಮಣ್ಯ ಗ್ರಾಮ ಪಂಚಾಯತ್ ಸದಸ್ಯ ದಿಲೀಪ್, ಕಚೇರಿ ಸಿಬ್ಬಂದಿಗಳು ,ಸಂಜೀವಿನಿ ಹಾಗೂ ಸ್ವಾಸಹಾಯ ಒಕ್ಕೂಟದ ಸದಸ್ಯರು ,ಸ್ಥಳೀಯ ಉದ್ಯಮಿಗಳು ಹಾಜರಿದ್ದರು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಅವರು ಸ್ವಾಗತಿಸಿ ವಂದಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...