Wednesday, February 12, 2025

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀನಿಕೇತನ ವಸ್ತು ಸಂಗ್ರಹಾಲಯ ಸಂಶೋಧನಾ ಕೇಂದ್ರ ಉದ್ಘಾಟನೆ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಪೌರಾಣಿಕ ಹಿನ್ನೆಲೆಯುಳ್ಳ ಇರುವ ಐತಿಹಾಸಿಕ ಕ್ಷೇತ್ರ ಪ್ರತಿನಿತ್ಯ ದೇಶದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಬಂದು ಹೋಗುತ್ತಾರೆ ಅಂತ ಭಕ್ತರಲ್ಲಿ ಸುಬ್ರಹ್ಮಣ್ಯದ ಇತಿಹಾಸವನ್ನು ಮಹತ್ವವನ್ನು ತಿಳಿಯಬೇಕೆಂಬ ಹಂಬಲ ಉಳ್ಳವರಾಗಿರುತ್ತಾರೆ ಇಲ್ಲಿನ ಇತಿಹಾಸವನ್ನು ತಿಳಿಸಲು ಹಾಗೂ ಈ ಕ್ಷೇತ್ರದ ಮಹತ್ವದ ಬಗ್ಗೆ ಶಿಕ್ಷಣ ಹಾಗೂ ಮಾಹಿತಿ ನೀಡುವ ಸಲುವಾಗಿ ಇಂದು ಇಲ್ಲಿ ಈ ವಸ್ತು ಸಂಗ್ರಹಾಲಯ ಹಾಗೂ ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರ ಲೋಕಾರ್ಪಣೆಯಾಗಿದೆ ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.

ಅವರು ರವಿವಾರ ಸುಬ್ರಹ್ಮಣ್ಯದ ವನದುರ್ಗ ದೇವಿ ದೇವಸ್ಥಾನದ ಸಮೀಪದ ಅಭಯ ಮಹಾಗಣಪತಿ ದೇವಸ್ಥಾನದ ಕೆಳ ಅಂತಸ್ತಿನಲ್ಲಿ ಶ್ರೀನಿಕೇತನ ವಸ್ತು ಸಂಗ್ರಹಾಲಯವನ್ನು ಉದ್ಘಾಟಿಸಿ ಮಾತನಾಡಿದರು .

ಸಮಾರಂಭದ ಅಧ್ಯಕ್ಷತೆಯನ್ನು NACCನ ಮಾಜಿ ನಿರ್ದೇಶಕರಾದ ಪ್ರೊ.ಎಸ್ ಪಿ ಶರ್ಮ ವಹಿಸಿದ್ದರು. ವಸ್ತು ಸಂಗ್ರಹಾಲಯದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾl ಎಸ್ ಅಹಲ್ಯ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಧಾರವಾಡ ಬನಶಂಕರಿ ಜೆಎಸ್ಎಸ್ ಕಾಲೇಜಿನ ಇತಿಹಾಸ ವಿಭಾಗದ ಡಾlಎಚ್ ವಿಷ್ಣುವರ್ಧನ್, ಸುಬ್ರಮಣ್ಯ ಮಠದ ದಿವಾನರಾದ ಶ್ರೀ ಸುದರ್ಶನ ಜೋಯಿಸ್ ,ಸುಬ್ರಹ್ಮಣ್ಯದ ಇತಿಹಾಸ ತಜ್ಞರಾದ ಡಾl ಕೆ ಎಸ್ ಎನ್ ಉಡುಪ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.

ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ ನಿರ್ದೇಶಕರಾದ ಡಾl ಜಿ .ವಿ .ಕಲ್ಲಾಪುರ ಸ್ವಾಗತಿಸಿದರು. ಬಿಳಿನೆಲೆ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸತ್ಯಶಂಕರ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ನಿವೃತ್ತ ಪ್ರಾಚಾರ್ಯ ವೆಂಕಟೇಶ್ ಮಂಜುಳಗಿರಿ ವಂದಿಸಿದರು.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...