Thursday, June 26, 2025

ಪುತ್ತೂರು: ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವೃದ್ಧ

ಪುತ್ತೂರು : ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರಂದು ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್‌‌ (74) ಎಂದು ಗುರುತಿಸಲಾಗಿದೆ.

20 ದಿನಗಳ ಹಿಂದೆ ಸೇಸಪ್ಪ ಕುಲಾಲ್‌‌‌‌ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ, ಕೆಲಸಕ್ಕೂ ಹೋಗದೆ ಮನೆಯಲ್ಲೇ ಇರುತ್ತಿದ್ದರು. ಜೂನ್‌‌ 10 ಬುಧವಾರದಂದು ರಾತ್ರಿ ಊಟ ಮಾಡಿ ಮಲಗಿದ್ದ ಅವರು ಬೆಳಗ್ಗೆ ನಾಪತ್ತೆಯಾಗಿದ್ದರು. ಅವರ ಮೊಬೈಲ್‌ಗೆ ಮನೆಮಂದಿ ಕರೆ ಮಾಡಿದ ಸಂದರ್ಭ ತೋಟದ ಕೆರಯ ಬಳಿ ಮೊಬೈಲ್‌ ರಿಂಗ್‌‌‌ ಆಗಿದ್ದು, ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಮೃತದೇಹ ಕಂಡುಬಂದಿದೆ.
ಸೇಸಪ್ಪ ಕುಲಾಲ್‌ ಅವರು ಮಕ್ಕಳ ಮೇಲೆ ದೂರು ನೀಡಿದ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತರ ಪತ್ನಿ ಕಮಲಾ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್‌‌‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...