Wednesday, January 28, 2026

ನೇಣು ಬಿಗಿದು ಯುವ ಜೋಡಿ ಆತ್ಮಹತ್ಯೆ

ಸುಳ್ಯ: ಇಲ್ಲಿನ ವಸತಿ ಗೃಹದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಯುವಕ ಮತ್ತು ಯುವತಿಯ ಶವ ಕಂಡುಬಂದಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸುಳ್ಯ ತಾಲೂಕಿನ ಐವರ್ನಾಡಿನ ಕಟ್ಟತ್ತಾರು ನಿವಾಸಿ ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಹಾಗೂ ಧರ್ಮಸ್ಥಳ ಸಮೀಪ ನಾರ್ಯ ಕಲ್ಕಜೆಯ ಶೇಷಪ್ಪ ಎಂಬುವವರ ಪುತ್ರಿ ಇಂದಿರಾ(19) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ.

ಈ ಯುವ ಜೋಡಿ ವಸತಿ ಗೃಹದಲ್ಲಿ ತಂಗಿದ್ದು, ಆ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಸತಿ ಗೃಹದ ಸಿಬ್ಬಂದಿ ಕಿಟಕಿ ಮೂಲಕ ನೋಡಿದ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ತಕ್ಷಣವೇ ವಸತಿ ಗೃಹದವರು ಪೊಲೀಸರಿಗೆ ದೂರು ನೀಡಿದ್ದು, ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯುವಕನ ಮನೆಯವರು ಈಗಾಗಲೇ ಸ್ಥಳಕ್ಕಾಗಮಿಸಿದ್ದು, ಯುವತಿಯ ಕುಟುಂಬಸ್ಥರು ಬಂದ ಬಳಿಕ ವಸತಿ ಗೃಹದ ಬಾಗಿಲು ತೆಗೆಯಲು ನಿರ್ಧರಿಸಲಾಗಿದೆ.
ಪ್ರೀತಿಗೆ ನಿರಾಕರಿಸಿದಕ್ಕೆ ಈ ಜೋಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...