Monday, January 26, 2026

ತಾಯಿಯ ಕುರಿತು ಸ್ಟೇಟಸ್ ಹಾಕಿ ಯುವಕ ಆತ್ಮಹತ್ಯೆ

ಬಂಟ್ವಾಳ: ಅನಾರೋಗ್ಯದಲ್ಲಿ ತಾಯಿಯನ್ನು ಉಳಿಸಲು ಸಾಧ್ಯವಾಗಿಲ್ಲ, ತಾಯಿಗಿಂತ ಮೊದಲು ತಾನೇ ಹೋಗುತ್ತೇನೆ ಎಂದು ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಅನಂತಾಡಿ ಪಂತಡ್ಕ ನಿವಾಸಿ ನೀರಜ್ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಯುವಕನ ತಾಯಿ ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಪಾಣೆಮಂಗಳೂರು ಸೇತುವೆಯಿಂದ ಯುವಕ ರಾತ್ರಿ ನದಿಗೆ ಹಾರಿದ್ದು, ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಸೋಮವಾರ ರಾತ್ರಿ ಹುಡುಕಾಡಿದರೂ, ಯುವಕನ ಸುಳಿವು ಪತ್ತೆಯಾಗಿರಲಿಲ್ಲ.
https://youtu.be/VOMaNu6V4PE
ಸ್ಥಳೀಯ ಈಜುಗಾರ ಮೊಹಮ್ಮದ್ ನಂದಾವರ ಹಾಗೂ ತಂಡ, ಬಂಟ್ವಾಳ ಅಗ್ನಿಶಾಮಕ ದಳದ ತಂಡ ಹುಡುಕಾಟ ನಡೆಸಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...

ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿ : ತಹಶೀಲ್ದಾರ್ ಜಿ. ಮಂಜುನಾಥ್

ಬಂಟ್ವಾಳ : ಬಲಿಷ್ಠ ಭಾರತದ ನಿರ್ಮಾಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಎಲ್ಲರನ್ನು ಒಳಗೊಂಡ ಸಮೃದ್ಧ ಭಾರತವನ್ನು ಸಂವಿಧಾನದ ಶಕ್ತಿಯಜೊತೆ ನಿರ್ಮಿಸೋಣ ಎಂದು ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಜಿ ಮಂಜುನಾಥ್ ಹೇಳಿದರು. ಬಂಟ್ವಾಳ ತಾಲೂಕು ರಾಷ್ಟ್ರೀಯ...