ಬಂಟ್ವಾಳ: ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಶಾಲೆಗಳಲ್ಲಿ ನಡೆಯುವ ಕ್ರೀಡಾ ಕೂಟಗಳಿಂದ ಪ್ರತಿಭೆಗಳಿಗೆ ಅವಕಾಶ ಲಭಿಸುತ್ತದೆ. ಇಲ್ಲಿ ದೊರೆತ ಅವಕಾಶಗಳಿಂದ ಸ್ಪೂರ್ತಿ ಪಡೆದು ಮುಂದೆ ಕಠಿಣ ಅಭ್ಯಾಸದಲ್ಲಿ ತೊಡಗಿ ರಾಜ್ಯ, ರಾಷ್ಟ್ರ ಮಟ್ಟಗಳಲ್ಲಿ ಗೆದ್ದು ಸಾಧನೆ ಮಾಡಬೇಕು ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಉಮರ್ ಫಾರುಕ್ ಅವರು ಹೇಳಿದರು.
ಅವರು ಸರಕಾರಿ ಪ್ರೌಢಶಾಲೆ ಸುಜೀರು ಇಲ್ಲಿ ಆಯೋಜಿಸಲಾದ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.

ಪುದು ಗ್ರಾ.ಪಂ. ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ವಿಧ್ಯಾಭಿಮಾನಿ ಮಜೀದ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜಯವತಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳಾದ ಭಾಸ್ಕರ್ ರೈ, ಝುಬೇರ್, ಟಿ.ಅಬುಬಕ್ಕರ್, ಸೆಫಿಯ, ಹರಿಣಾಕ್ಷಿ, ವಸಂತಿ, ನಬಿಸ ಮತ್ತಿತರರು ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶಶಿಮಂಗಳ ವೈ. ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಹಮ್ಮದ್ ಬಿ. ಕಾರ್ಯಕ್ರಮ ನಿರೂಪಿಸಿದರು. ಜಯಪ್ರಕಾಶ್ ಕೆ.ಎಸ್. ವಂದಿಸಿದರು.
