ಸುಳ್ಯ: ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಡೆದಿದೆ.


ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ.
ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದರೆನ್ನಲಾಗಿದ್ದು, ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ರಾತ್ರಿಯೇ ಪೋಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.












