ಕೆಪಿಸಿಸಿ ಅಧ್ಯಕ್ಷ, ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಸುಳ್ಯಕ್ಕೆ ಆಗಮಿಸಿದ್ದಾರೆ. 11 ಗಂಟೆಗೆ ಸುಳ್ಯಕ್ಕೆ ಆಗಮಿಸಿದ ಅವರಿಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಅದ್ದೂರಿ ಸ್ವಾಗತಿಸಿ ನೀಡಿದರು. ಪೈಚಾರ್ ಮತ್ತು ಜ್ಯೋತಿ ವೃತ್ತದಲ್ಲಿ ಸ್ವಾಗತಿಸಿದರು.


ಬಳಿಕ ನ್ಯಾಯಾಲಯಕ್ಕೆ ಆಗಮಿಸಿದರು. ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದ ಸಂದರ್ಭದಲ್ಲಿ ವಿದ್ಯುತ್ ಸಮಸ್ಯೆ ಸಂಬಂಧಪಟ್ಟು ಡಿ.ಕೆ.ಶಿವಕುಮಾರ್ ಮತ್ತು ಬೆಳ್ಳಾರೆಯ ಸಾಯಿ ಗಿರಿಧರ್ ನಡುವಿನ ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ
ನುಡಿಯಲು ಶಿವಕುಮಾರ್ ಅವರು ಸುಳ್ಯ ನ್ಯಾಯಾಲಯಕ್ಕೆ ಆಗಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟು ಹಲವು ಬಾರಿ ಸಮನ್ಸ್ ಮತ್ತು ವಾರೆಂಟ್ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಡಿ.ಕೆ. ಶಿವಕುಮಾರ್ ಹಾಜರಾಗದಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸೆ.29ರಂದು ಹಾಜರಾಗಲು ವಾರಂಟ್ ಜಾರಿ ಮಾಡಿದ್ದರೂ ಅಂದು ಡಿಕೆಶಿ ಆಗಮಿಸದ ಕಾರಣ ಮುಂದೂಡಲಾಗಿತ್ತು. ಇಂದು ಸುಳ್ಯಕ್ಕೆ ಆಗಮಿಸಿದ ಅವರು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ನುಡಿದರು.

