ಸುಳ್ಯ: ಮಹಿಳೆಯೋರ್ವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ಳಾರೆಯ ಮಹಿಳೆಯೋರ್ವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಧ್ಯಾಹ್ನ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಅಸ್ವಸ್ಥರಾಗಿದ್ದು, ಮಾಹಿತಿ ತಿಳಿದ ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದ್ರೆ ಘಟನೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿಲ್ಲ.