Wednesday, February 12, 2025

ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ

ಕಲ್ಲಡ್ಕ:  ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೆಣ್ಣುಮಕ್ಕಳ ಸುರಕ್ಷಾ ಕಾರ್ಯಕ್ರಮ ನಡೆಯಿತು. ಮಾತೃಭಾರತಿ ಸಮಿತಿಯ ಸದಸ್ಯರಾದ ಮಮತಾ ಮಾತಾಜಿಯವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಪೌಢಾವಸ್ಥೆಗೆ ಬಂದಾಗ ದೇಹದಲ್ಲಿ ಉಂಟಾಗುವ ಬದಲಾವಣೆ, ದೈಹಿಕ ಹಾಗೂ ಮಾನಸಿಕ ಸ್ವಚ್ಛತೆ, ಅಪರಿಚಿತರೊಂದಿಗೆ ತಮ್ಮ ವರ್ತನೆ, ಮಾನಸಿಕ ನಿಯಂತ್ರಣದೊಂದಿಗೆ ಹೆಣ್ಣುಮಕ್ಕಳ ಸಮಸ್ಯೆಯ ಪರಿಹಾರದ ಬಗ್ಗೆ ತಿಳಿಸಿದರು.


ಹೆಣ್ಣುಮಕ್ಕಳ ಸುರಕ್ಷೆಯ ನಿಟ್ಟಿನಲ್ಲಿ ಶಾಲೆಯ ಪೋಷಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನೊಳಗೊಂಡ ಸುರಕ್ಷಾ ಸಮಿತಿಯನ್ನು ರಚಿಸಲಾಯಿತು.
ವೇದಿಕೆಯಲ್ಲಿ ಮಾತೃಭಾರತಿಯ ಸದಸ್ಯರು ,ಮತ್ತುಪೋಷಕರಾದ ಮಮತಾ ಎಸ್ ಶೆಟ್ಟಿ, ರಾಜೀವಿ, ಸ್ವಾತಿ, ಸಂಧ್ಯಾರಾಣಿ ಮತ್ತು ಪವಿತ್ರರವರು ಉಪಸ್ಥಿತಿಯಿದ್ದರು.
ಕಾರ್ಯಕ್ರಮವನ್ನು ಶಿಕ್ಷಕರಾದ ಶಶಿಕಲಾ ನಿರೂಪಿಸಿ, ಅನ್ನಪೂರ್ಣ ಸ್ವಾಗತಿಸಿ ವಂದಿಸಿದರು

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...