ಬಂಟ್ವಾಳ: ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿಕೊಡಲು ತಾಯಿ ರಾಜರಾಜೇಶ್ವರಿ ದೇವಿಯ ಆರ್ಶೀವಾದ ಬಹಳ ಮುಖ್ಯವಾಗಿತ್ತು. ಪರೀಕ್ಷೆ ಆರಂಭದ ದಿನಗಳಲ್ಲಿ ಯಾವುದೇ ವಿಘ್ನವಿಲ್ಲದೆ ಪರೀಕ್ಷೆ ನಡೆಯಲಿ ಎಂದು ತಾಯಿಯಲ್ಲಿ ಬೇಡಿಕೊಂಡಿದ್ದೆ, ಇಡೀ ರಾಜ್ಯದಲ್ಲಿ ಯಶಸ್ವಿಯಾಗಿ ನಿರ್ವಿಘ್ನವಾಗಿ ಪರೀಕ್ಷೆ ನಡೆದಿದೆ.

ಅ ಹಿನ್ನೆಲೆಯಲ್ಲಿ ತಾಯಿಗೆ ಧನ್ಯವಾದ ಹೇಳಲು ಇಂದು ದೇವಾಲಯಕ್ಕೆ ಭೇಟಿ ನೀಡಿದ್ದು, ದೇವಿಗೆ ಪೂಜೆ ಸಲ್ಲಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾದ್ಯಮದವರಲ್ಲಿ ತಿಳಿಸಿದರು.
ಆನ್ ಲೈನ್ ಶಿಕ್ಷಣದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ಮಾಜಿ ಶಿಕ್ಷಣ ಸಚಿವರುಗಳನ್ನು ಕರೆದು ಅವರ ಜೊತೆ ಸಭೆ ನಡೆಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಖಾಸಗಿ ಶಾಲೆಗಳ ಶಿಕ್ಷಕರ ಆರ್ಥಿಕ ಮುಗ್ಗಟ್ಟುಗಳ ಬಗ್ಗೆ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಕರ ಸಂಘದ ಆದ್ಯಕ್ಷರುಗಳನ್ನು ಕರೆದು ಮಾತುಕತೆ ನಡೆಸಿದ್ದು, ಅವರಿಂದ ಪೂರಕ ಸ್ಪಂದನೆ ವ್ಯಕ್ತವಾಗಿದೆ.
ಪರಿಸ್ಥಿತಿ ತಿಳಿಯಾದ ಬಳಿಕ ಮತ್ತೊಮ್ಮೆ ಪೋಷಕರ ಅಭಿಪ್ರಾಯ ಸಂಗ್ರಹಿಸಿ ಶಾಲೆಪ್ರಾರಂಭದ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಹಾಗೂ ಇಲಾಖಾ ಪ್ರಮುಖರು ಉಪಸ್ಥಿತರಿದ್ದರು.
ಬಳಿಕ ಪರೀಕ್ಷೆ ಯಶಸ್ವಿಯಾಗಿ ನಡೆಯಲು ಸಹಕರಿಸಿದ ತಾಲೂಕಿನ ಎಲ್ಲಾ ಆಧಿಕಾರಿಗಳನ್ನು ಸಚಿವರು ಅಭಿನಂದಿಸಿದರು.
