ಬಂಟ್ವಾಳ: ಪೊಳಲಿ ಕ್ಷೇತ್ರಕ್ಕೆ ಪ್ರಾರ್ಥನೆ ಸಲ್ಲಿಸುವ ನಿಟ್ಟಿನಲ್ಲಿ ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಆಗಮಿಸಿದ್ದು, ದೇವಸ್ಥಾನದ ಪ್ರವೇಶ ದ್ವಾರದಲ್ಲೇ ಕಾಲಿನಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆದ ಕೌಶಿಕ್ ನನ್ನು ಭೇಟಿಯಾಗಿ ಆತನ ಜತೆ ಉಭಯ ಕುಶಲೋಪಚಾರಿ ವಿಚಾರಿಸಿದರು.


ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ ಚಟುವಟಿಕೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ಯಾವ ಪರೀಕ್ಷೆ ಹೇಗಿತ್ತು ಎಂಬ ಮಾಹಿತಿ ಪಡೆದರು. ನಿನ್ನ ಸಾಧನೆಯ ಕುರಿತು ಅದೇ ದಿನ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದೆ ಎಂದರು. ತಮ್ಮ ಪಿಎಯನ್ನು ಕರೆದು ಪೋಟೊ ತೆಗೆಸಿಕೊಂಡರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮೊದಲಾದವರು ಜತೆಗಿದ್ದರು.

