Saturday, January 31, 2026

ಆಪತ್ತಿನಲ್ಲಿ ನೆರವಾದ ಆಪತ್ಬಾಂಧವರು

ಬಂಟ್ವಾಳ : ಕಷ್ಟ ಬಂದಾಗ ನೆರವಾಗುವವರು ಆಪತ್ಭಾಂಧವ ಎನ್ನಿಸಿಕೊಳ್ಳುತ್ತಾರೆ. ಸೂರಿಕುಮೇರುವಿನಲ್ಲಿ ಮಂಗಳವಾರ ಮುಂಜಾನೆ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದ ಸಂದರ್ಭದಲ್ಲೂ ಜಾತಿ ಮತ ಮರೆತು ಸೂರಿಕುಮೇರು ಪರಿಸರದ ಜನತೆ ಮೆರೆದ ಮಾನವೀಯತೆ ನಿಜಕ್ಕೂ ಪ್ರಶಂಸನೀಯ.

ಇಲ್ಲಿನ ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ನ ಸಮಿತಿಯ ಸಂಯೋಜಕ ಆಲ್ವಿನ್ ಪಾಯ್ಸ್, ಕಿಶೋರ್ ಸಂತೋಷ್ ಪಿಂಟೊ ಮತ್ತು ಮಾಣಿ ಗ್ರಾಮ ಪಂಚಾಯತ್ ನೂತನ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್ ರವರು ಕೂಡ ಇದೇ ಆಪತ್ಬಾಂಧವರ ಸಾಲಿಗೆ ಸೇರಿದವರು. ಟ್ಯಾಂಕರ್ ಬಿದ್ದ ವಿಚಾರ ತಿಳಿಯುತ್ತಲೇ ಒಂದೆಡೆ ಮಸೀದಿಯ ಧ್ವನಿವರ್ಧಕ ದ ಮೂಲಕ ಎಲ್ಲರೂ ಜಾಗ್ರತೆಯಿಂದ ಇರುವಂತೆ ಸೂಚಿಸಿದರೆ, ಇತ್ತ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ವ್ಯಾಪ್ತಿಯಲ್ಲೂ ವಿಶೇಷ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಯಿತು. ಸ್ಟೀವನ್ ಪ್ರಕಾಶ್ ಮಾರ್ಟಿಸ್, ಅಲ್ವಿನ್ ಪಾಯ್ಸ್, ಕಿಶೋರ್ ಸಂತೋಷ್ ಪಿಂಟೋ ಹಾಗೂ ಮೆಲ್ವಿನ್ ಕಿಶೋರ್‌ ಮಾರ್ಟಿಸ್ ರವರೂ ಸ್ಥಳೀಯವಾಗಿ ಮನೆಮನೆಗೂ ಜಾಗೃತಿ ಸಂದೇಶ ತಲುಪಿಸಿದರಲ್ಲದೆ, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೂ ಸಮಸ್ಯೆಯಾಗದ ರೀತಿಯಲ್ಲಿ ಮಾರ್ಗದರ್ಶನ ನೀಡಿದರು. ಜೊತೆಗೆ ಟ್ಯಾಂಕರ್ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರಿಗೆ, ಅಗ್ನಿಶಾಮಕ ಅಧಿಕಾರಿಗಳಿಗೆ ವಿಶೇಷ ಸಾಥ್ ನೀಡಿದರು. ಇವರ ಈ ಕಾರ್ಯ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಸಮಿತಿಯಿಂದಲೂ ಶ್ಲಾಘನೆಗೆ ಪಾತ್ರವಾಗಿದ್ದು, ಚರ್ಚ್‌ನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ, ಉಪಾಧ್ಯಕ್ಷ ಎಲಿಯಾಸ್ ಮತ್ತು ಕಾರ್ಯದರ್ಶಿ ಮೇರಿ ಡಿಸೋಜ ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.

More from the blog

ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ 

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ಸಂಘ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಬಿ.ಸಿ.ರೋಡ್ ಸರಕಾರಿ ನೌಕರರ ಭವನದಲ್ಲಿ ಸಂಘದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಪಿ .ಲೋಕನಾಥ ಶೆಟ್ಟಿ ಇವರ...

ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ..

ಬಂಟ್ವಾಳ : ಬಿ ವಿ ಕಾರಂತ ರಂಗ ಭೂಮಿಕಾ ಟ್ರಸ್ಟ್ ವತಿಯಿಂದ ಬಿ.ವಿ. ಕಾರಂತ ನೆನಪಿನ ಮಂಚಿ ನಾಟಕೋತ್ಸವ ಮಂಚಿ ಕುಕ್ಕಾಜೆಯ ಸಿದ್ಧಿ ವಿನಾಯಕ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಎರಡು ದಿವಸಗಳ ಈ...

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...