ವಿಟ್ಲ: ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಫೆ.24 ಮತ್ತು 25ರಂದು ಸ್ವಸ್ತಿಕ್ ಕಲೋತ್ಸವ ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ತಾರಾನಾಥ ವಿಟ್ಲ ತಿಳಿಸಿದರು.

ವಿಟ್ಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾರ್ಯಕ್ರಮದಲ್ಲಿ ಸಸ್ಯಲೋಕ, ಆಹಾರಮೇಳ ಹಾಗೂ ಅಂತರರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಬಡ್ಡಿ ಪಂದ್ಯಾಟದಲ್ಲಿ ಆಯ್ದ ರಾಜ್ಯ, ಅಂತಾರಾಜ್ಯ ಮಟ್ಟದ ಹದಿನಾರು ತಂಡಗಳು ಪಾಲ್ಗೊಳ್ಳಲಿವೆ ಎಂದರು.
ಸಮಾರಂಭಕ್ಕೆ ಸಂಸದ ನಳಿನ್ ಕುಮಾರ್ ಕಟೀಲು, ಸತೀಶ್ ಕುಂಪಲ, ರಾಜ್ಯ ಸಭಾ ಸದಸ್ಯ ಜಗ್ಗೇಶ್, ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಮೊದಲಾದವರು ಭಾಗವಹಿಸಲಿದ್ದಾರೆ.
ಕದ್ರಿಯ ನಂದಗೋಕುಲ ತಂಡದಿಂದ, ಕಲ್ಲಡ್ಕದ ಕಲಾ ತಂಡ, 25 ರಂದು ಮೂಡುಬಿದಿರೆ ಆಳ್ವಾಸ್ ಕಲಾ ತಂಡದಿಂದ ಸಾಂಸ್ಕೃತಿಕ ವೈವಿಧ್ಯ ಜರಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವನಾಥ ಅಳಿಕೆ, ಪ್ರಕಾಶ್, ನಾಗೇಶ್ ಮೊದಲಾದವರು ಉಪಸ್ಥಿತರಿದ್ದರು.